ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ 166 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ.
ಈ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 895ಕ್ಕೆ ಏರಿದೆ. ದೇಶದಲ್ಲಿ ಈವರೆಗೆ ಒಟ್ಟು 4,50,03,055 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಈವರೆಗೆ 5,33,306 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಸದ್ಯ ಈವರೆಗೂ 4,44,68,854 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಕೋವಿಡ್ ರಾಷ್ಟ್ರೀಯ ಚೇತರಿಕೆ ದರ ಶೇ 98.81 ರಷ್ಟಿದೆ. ಮರಣ ಪ್ರಮಾಣ ದರ ಶೇ 1.19 ರಷ್ಟಿದೆ.