Thursday, 12th December 2024

ಸೌಹಾರ್ದ ಕ್ರಿಕೆಟ್ ಆಟದ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೌಹಾ ರ್ದ ಕ್ರಿಕೆಟ್ ಆಟದ ವೇಳೆ ಬಿಜೆಪಿ ಕಾರ್ಯಕರ್ತರೊಬ್ಬರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೊಡೆದ ಚೆಂಡನ್ನು ಹಿಡಿಯಲು ಪ್ರಯ ತ್ನಿಸುತ್ತಿದ್ದ ಬಿಜೆಪಿ ಕಾರ್ಯಕರ್ತ ವಿಕಾಸ್ ಮಿಶ್ರಾ ಗಾಯಗೊಂಡಿದ್ದಾರೆ. ವಿಕಾಸ್ ಮಿಶ್ರಾ ಹಣೆಗೆ ಚೆಂಡು ತಾಗಿದ್ದು, ರಕ್ತ ಸುರಿಯುತ್ತಿದ್ದ ಅವರನ್ನು ಆಸ್ಪತ್ರಗೆ ದಾಖಲಿಸಲಾಗಿದೆ.

ರೇವಾ ಜಿಲ್ಲೆಯ ಇಟೌರಾದಲ್ಲಿ ಹೊಸದಾಗಿ ನಿರ್ಮಿಸಲಾದ ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣ ಉದ್ಘಾಟನೆಗೊಂಡ ನಂತರ ಸೌಹಾರ್ದ ಪಂದ್ಯವನ್ನು ಆಯೋಜಿಸಲಾಗಿತ್ತು, ಜ್ಯೋತಿರಾದಿತ್ಯ ಸಿಂಧಿಯಾ ಬ್ಯಾಟಿಂಗ್ ಮಾಡುತ್ತಿದ್ದಾಗ ಚೆಂಡು ಬಿಜೆಪಿ ಕಾರ್ಯಕರ್ತನಿಗೆ ಬಡಿದಿತ್ತು.

ವಿಕಾಸ್ ಮಿಶ್ರಾ ಗಾಯಗೊಂಡ ತಕ್ಷಣ ಆಟವನ್ನು ಅರ್ಧಕ್ಕೆ ನಿಲ್ಲಿಸಿ, ಅವರನ್ನು ಸಂಜಯ್ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯ ಲಾಗಿತ್ತು. ಮಾಜಿ ಸಚಿವ ರಾಜೇಂದ್ರ ಶುಕ್ಲಾ ಮತ್ತು ರೇವಾ ಸಂಸದ ಜನಾರ್ದನ್ ಮಿಶ್ರಾ ಅವರೊಂದಿಗೆ ಜ್ಯೋತಿರಾದಿತ್ಯ ಸಿಂಧಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದರು.