Friday, 13th December 2024

ಉಗ್ರ ದಾಳಿ: ಇಬ್ಬರು ಸಿಆರ್’ಪಿಎಫ್ ಸಿಬ್ಬಂದಿ ಸಾವು

ಶ್ರೀನಗರ: ಉಗ್ರರು ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಯೋಧರು ಸಾವಿಗೀಡಾಗಿದ್ದಾರೆ.

ನೌಗಾಮ್ ಪ್ರದೇಶದಲ್ಲಿ ಉಗ್ರರು ಸೋಮವಾರ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ ದಾಳಿಗೆ ಇಬ್ಬರು ಸಿಆರ್ ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಪಂಪೋರ್‌ನಲ್ಲಿ ಗಸ್ತು ತಿರುಗುತ್ತಿದ್ದ ಸಿಆರ್‌ಪಿಎಫ್‌ ಸಿಬ್ಬಂದಿ ಮೇಲೆ ಉಗ್ರರು ಸೋಮವಾರ ದಾಳಿ ನಡೆಸಿದ್ದಾರೆ. ಗಾಯಗೊಂಡಿದ್ದ ಐವರು ಸಿಬ್ಬಂದಿಯನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆ ಪೈಕಿ ಇಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ದಾಳಿಯ ಬಳಿಕ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಲ್ಲಿಸಲಾಗಿದೆ ಹಾಗೂ ಭದ್ರತಾ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ.