Saturday, 7th September 2024

ಕ್ರಿಪ್ಟೋ ಕರೆನ್ಸಿಗಳಲ್ಲಿ ಅಕ್ರಮ ವಹಿವಾಟು: 20 ಸಂಸ್ಥೆಗಳ ಮೇಲೆ ನಿಗಾ

Crypto Currency

ವದೆಹಲಿ: ಕಡಿಮೆ ಅವಧಿಯಲ್ಲಿ ಹೆಚ್ಚಿನ ಆದಾಯ ನೀಡುವ ಹಾಗೂ ಕ್ರಿಪ್ಟೋ ಕರೆನ್ಸಿಗಳಲ್ಲಿ ಅಕ್ರಮ ವಹಿವಾಟು ನಡೆಸುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು 20 ಸಂಸ್ಥೆಗಳ ಮೇಲೆ ನಿಗಾ ವಹಿಸಿರುವುದಾಗಿ ವರದಿ ತಿಳಿಸಿದೆ.

ಹಣಕಾಸು ವರ್ಗಾವಣೆ ನಿಗ್ರಹ ಕಾಯ್ದೆ(ಪಿಎಂಎಲ್ ಎ)ಯಡಿ 20 ಕ್ರಿಪ್ಟೋ ಕರೆನ್ಸಿ ವಹಿವಾಟು ನಡೆಸುತ್ತಿರುವ ಸಂಸ್ಥೆಗಳ ಕಾರ್ಯಚಟುವಟಿಕೆಯ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಹಣಕಾಸು ಸಚಿವಾಲಯ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡಿದೆ.

20 ಸಂಸ್ಥೆಗಳ ವಹಿವಾಟಿನ ವಿರುದ್ಧ ಸಾರ್ವಜನಿಕರಿಂದ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿರುವುದಾಗಿ ಮೂಲಗಳು ತಿಳಿಸಿವೆ.

ಕ್ರಿಪ್ಟೋ ಕರೆನ್ಸಿ ವಹಿವಾಟು ನಡೆಸುತ್ತಿರುವ 20 ಸಂಸ್ಥೆಗಳ ಕಾರ್ಯಚಟು ವಟಿಕೆ ಮೇಲೆ ಜಾರಿ ನಿರ್ದೇಶನಾಲಯ, ಸಿಬಿಐ ಹಾಗೂ ರಾಜ್ಯದ ತನಿಖಾ ಸಂಸ್ಥೆಗಳು ಸೂಕ್ಷ್ಮ ನಿಗಾ ವಹಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿರುವುದಾಗಿ ವರದಿ ಹೇಳಿದೆ.

ಕ್ರಿಪ್ಟೋ ಕರೆನ್ಸಿ ಎನ್ನುವುದು ಡಿಜಿಟಲ್ ಕರೆನ್ಸಿಯಾಗಿದ್ದು, ಇದನ್ನು ಕಂಪ್ಯೂಟರ್ ನೆಟ್ವರ್ಕ್ ಮೂಲಕ ವಿನಿಮಯದ ವಹಿವಾಟು ನಡೆಸುವಂತೆ ವಿನ್ಯಾಸಗೊಳಿಸಲಾಗಿದೆ.

ಈ ನಿಟ್ಟಿನಲ್ಲಿ ಕಾನೂನು ಬಾಹಿರವಾಗಿ ಕ್ರಿಪ್ಟೋ ಕರೆನ್ಸಿ ವಹಿವಾಟು ನಡೆಸುತ್ತಿರುವ ಸಂಸ್ಥೆಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹಣಕಾಸು ಸಚಿವಾಲಯ ನಿರ್ದೇಶನ ನೀಡಿರುವುದಾಗಿ ವರದಿ ತಿಳಿಸಿದೆ.

error: Content is protected !!