Friday, 13th December 2024

ಗೋವಾದಲ್ಲಿ ಜೂ.21 ರ ವರೆಗೆ ಕರ್ಫ್ಯೂ ಜಾರಿ

ಪಣಜಿ: ಗೋವಾ ಸರ್ಕಾರ ರಾಜ್ಯಾದ್ಯಂತ ಕರ್ಫ್ಯೂ ಕಾಲಾವಧಿಯನ್ನು 7 ದಿನಗಳ ಕಾಲ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ಮದುವೆ ಸಮಾರಂಭಗಳನ್ನು 50 ಜನರ ಉಪಸ್ಥಿತಿಯಲ್ಲಿ ನಡೆಸಲು ಪರವಾನಗಿ ನೀಡಲಾಗಿದೆ. ಪಂಚಾಯತ್, ಪಾಲಿಕೆ ಮಾರ್ಕೆಟ್ ಅಂಗಡಿ ಮುಂಗಟ್ಟುಗಳನ್ನು ಬೆಳಿಗ್ಗೆ 7 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ತೆರೆಯಲು ಅವಕಾಶ ಕಲ್ಪಿಸ ಲಾಗಿದೆ ಎಂದು ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಕರ್ಫ್ಯೂ ಕಾಲಾವಧಿ ಜೂ.14 ರಂದು ಮುಕ್ತಾಯಗೊಳ್ಳುತ್ತಿತ್ತು, ಇದನ್ನು ಸರ್ಕಾರವು 7 ದಿನಗಳ ಕಾಲ ವಿಸ್ತರಣೆ ಮಾಡಿದ್ದು, ಕೆಲ ವಿನಾಯತಿ ಗಳನ್ನು ನೀಡಿದೆ. ರಾಜ್ಯದಲ್ಲಿ ಜೂ.21 ರ ವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ.

ಕಳೆದ ವಾರ ಕರ್ಫ್ಯೂ ವಿಸ್ತರಣೆ ಮಾಡುವಾಗ ಸರ್ಕಾರವು ಮಳೆಗಾಲದ ಅಗತ್ಯ ವಸ್ತುಗಳ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿತ್ತು.