ಗುರುಗ್ರಾಮ್‌ನಲ್ಲಿ ನಾಲ್ಕಕ್ಕಿಂತ ಹೆಚ್ಚು ವ್ಯಕ್ತಿಗಳು ಸೇರುವುದನ್ನು ನಿರ್ಬಂಧಿಸ ಲಾಗಿದೆ. ಫರಿದಾಬಾದ್ ಜಿಲ್ಲೆಯ ಬಲ್ಲಭಗಢ ಪ್ರದೇಶದಲ್ಲಿ ಇಂದಿನಿಂದ 24 ಗಂಟೆಗಳ ಕಾಲ ಇಂಟರ್ನೆಟ್ ಮತ್ತು ಎಸ್‌ಎಂಎಸ್ ಸೇವೆಗಳನ್ನು ಸ್ಥಗಿತ ಗೊಳಿಸಿದೆ.
ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಮೂಲಕ ತಪ್ಪು ಮಾಹಿತಿ ಮತ್ತು ವದಂತಿಗಳ ಹರಡುವಿಕೆಯನ್ನು ತಡೆ ಯುವ ಸಲುವಾಗಿ, ಉಪ ವಿಭಾಗದ ಬಲ್ಲಬ್‌ಗಢದ ಪ್ರಾದೇಶಿಕ ನ್ಯಾಯ ವ್ಯಾಪ್ತಿಯಲ್ಲಿ ಮೊಬೈಲ್, ಇಂಟರ್ನೆಟ್ ಮತ್ತು ಎಸ್‌ಎಂ ಎಸ್ ಸೇವೆಗಳು ಮತ್ತು ಎಲ್ಲಾ ಡಾಂಗಲ್ ಸೇವೆಗಳನ್ನು ಸ್ಥಗಿತಗೊಳಿಸಲು ಹರಿಯಾಣ ಸರ್ಕಾರಕ್ಕೆ ನಿರ್ದೇಶನ ನೀಡ ಲಾಗಿದೆ ಎನ್ನಲಾಗುತ್ತಿದೆ.
ಬಿಹಾರದ ಪಾಟ್ನಾ ಜಿಲ್ಲೆಯ ದಾನಪುರ ರೈಲು ನಿಲ್ದಾಣದ ಕೆಲವು ಪ್ರತಿಭಟನಾ ಕಾರರು ರೈಲುಗಳನ್ನು ಸುಟ್ಟು ಹಾಕಿದ್ದು, ಮತ್ತು ರೈಲು ಹಳಿಗಳನ್ನು ಹಾನಿಗೊಳಿಸಿದ್ದಾರೆ.
ಅಗ್ನಿಪಥ್ ಯೋಜನೆ ವಿರುದ್ಧದ ಪ್ರತಿಭಟನೆಯಿಂದಾಗಿ ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆಯನ್ನು ತಡೆಗಟ್ಟುವ ದೃಷ್ಟಿಯಿಂದ ದೆಹಲಿ ಮೆಟ್ರೋ, ದೆಹಲಿ ಗೇಟ್ ಮತ್ತು ಜಾಮಾ ಮಸೀದಿ ಮೆಟ್ರೋ ನಿಲ್ದಾಣಗಳ ಎಲ್ಲಾ ಗೇಟ್‌ಗಳನ್ನು ಮುಚ್ಚಿದೆ.