ನವದೆಹಲಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಮಾ.೧೩ ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಥವಾ ಸಿಡಬ್ಲ್ಯೂಸಿ ಸಭೆ ನಡೆಯಲಿದೆ
ನಾಯಕತ್ವ ಬದಲಾವಣೆ ಪ್ರಶ್ನೆ ನಡುವೆ ಸೆಪ್ಟೆಂಬರ್ ನಲ್ಲಿ ನಿಗದಿಯಾಗಿರುವ ಆಂತರಿಕ ಚುನಾವಣೆ ಮುಂದೂಡುವ ಸಾಧ್ಯತೆ ಯಿದೆ ಎಂದು ಮೂಲಗಳು ತಿಳಿಸಿವೆ.
ಗುರುವಾರ ಪ್ರಕಟವಾದ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶಗಳಲ್ಲಿ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ತನ್ನ ನಿಯಂತ್ರಣದಲ್ಲಿದ್ದ ರಾಜ್ಯಗಳಲ್ಲಿ ಒಂದಾದ ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿದ್ದು, ಉಳಿದ ಮೂರು ರಾಜ್ಯ ಗಳಾದ ಉತ್ತರಾ ಖಂಡ್, ಗೋವಾ ಮತ್ತು ಮಣಿಪುರದಲ್ಲಿ ಅಧಿಕಾರಕ್ಕೆ ಮರಳು ಕನಸು ಭಗ್ನಗೊಂಡಿದೆ.
ಪಕ್ಷದಲ್ಲಿ ಬದಲಾವಣೆ ಕೋರಿ ಎರಡು ವರ್ಷದ ಹಿಂದೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದ ಜಿ-23 ನಾಯಕರಿಗೂ ಈ ಫಲಿತಾಂಶ ಮತ್ತೆ ಪುಷ್ಠೀಕರಿಸಿದೆ. ಆದಾಗ್ಯೂ, ಗಾಂಧಿ ಕುಟುಂಬಕ್ಕೆ ಆಪ್ತರಾದ ಮುಖಂಡರು ಅವರ ನಾಯಕತ್ವವನ್ನು ಬೆಂಬಲಿಸಿ ದ್ದಾರೆ.