Saturday, 14th December 2024

ಡಿ.21ರಂದು ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆ

ವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆ ಬಗ್ಗೆ ಅವಲೋಕನ, ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಕೈಗೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗಿದೆ.

ಡಿಸೆಂಬರ್ 21ರಂದು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆ ನಡೆಯಲಿದೆ.

4 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಸೋಲು, ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಮಣಿಸಲು ರೂಪಿಸಬೇಕಾದ ಕಾರ್ಯತಂತ್ರ, ಲೋಕಸಭೆ ಚುನಾವಣೆಯಲ್ಲಿ ಪ್ರಚಾರದ ಅಭಿಯಾನ, ‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳೊಂದಿಗೆ ಸೀಟು ಹಂಚಿಕೆ, ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ -2 ಬಗ್ಗೆ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಡಿಸೆಂಬರ್ 19ರಂದು ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಿಗದಿಯಾಗಿದ್ದು, ಡಿ.21ರಂದು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸಿಡಬ್ಲ್ಯೂಸಿ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಮಹತ್ವದ ನಿರ್ಧಾರ ಕೈಗೊಳ್ಳ ಲಾಗುವುದು ಎನ್ನಲಾ ಗಿದೆ.