Thursday, 12th December 2024

ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸಿ: ಸಿಡಬ್ಲ್ಯುಆರ್ಸಿ

ವದೆಹಲಿ : ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸಿಡಬ್ಲ್ಯುಆರ್ಸಿ ಸೂಚನೆ ನೀಡಿದೆ.

ಜನವರಿಯ ಮುಂದಿನ ದಿನಗಳಲ್ಲಿ ತಮಿಳುನಾಡಿಗೆ ಪ್ರತಿ ದಿನ 1,182 ಕ್ಯೂಸೆಕ್ ಹಾಗೂ ಫೆಬ್ರವರಿ ತಿಂಗಳಲ್ಲಿ ಪ್ರತಿ ದಿನ 998 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಆರ್ಸಿ ಸೂಚನೆ ನೀಡಿದೆ.

ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಆದೇಶ ನೀಡಿದೆ.

ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯದ ಪರ ಅಧಿಕಾರಿಗಳು ವಾದ ಮಂಡಿಸಿದ್ದರು. ಕರ್ನಾಟಕ, ಕಾವೇರಿ ಜಲಾನಯನ ಪ್ರದೇಶದ ಎಲ್ಲ ನಾಲ್ಕು ಜಲಾಶಯಗಳಲ್ಲಿ ಕೂಡ ಶೇ 52ರಷ್ಟು ಸಂಗ್ರಹ ಕೊರತೆ ಇದೆ ಎಂದು ತಿಳಿಸಿತು.