ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಮಿಸ್ತ್ರಿ ಭಾನುವಾರ ಸಂಜೆ ಮುಂಬೈ ಬಳಿ ರಸ್ತೆ ಅಪಘಾತದಲ್ಲಿ ನಿಧನರಾದರು.
ಪಾಲ್ಘರ್ ಪೊಲೀಸರ ಪ್ರಕಾರ, ಮಿಸ್ತ್ರಿ ಅವರು ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅವರ ಕಾರಿನಲ್ಲಿ ನಾಲ್ಕು ಜನರಿದ್ದರು. ಅಪಘಾತದಲ್ಲಿ ಮಿಸ್ತ್ರಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರು. ಇನ್ನಿಬ್ಬರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಮಿಸ್ತ್ರಿ ಅವರನ್ನು ಹೊರತುಪಡಿಸಿ, ಮತ್ತೊಬ್ಬ ಮೃತನನ್ನು ಜಹಾಂಗೀರ್ ದಿನಶಾ ಪಾಂಡೋಲೆ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಅನಯತ ಪಾಂಡೋಲೆ ಮತ್ತು ಡೇರಿಯಸ್ ಪಂಡೋಲೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.