ನವದೆಹಲಿ: ಕೇಂದ್ರ ಸಚಿವ ಸಂಪುಟವು ಶೇ.ಮೂರರಷ್ಟು ತುಟ್ಟಿಭತ್ಯೆ ಹೆಚ್ಚಿಸಲು ಅನುಮೋದನೆ ನೀಡಿದೆ.
ಈ ಮೂಲಕ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಪಿಂಚಣಿದಾರರಿಗೆ ಮತ್ತು ನೌಕರರಿಗೆ ದೀಪಾವಳಿಯ ಉಡುಗೊರೆ ನೀಡಿದೆ.
ಹೆಚ್ಚುತ್ತಿರುವ ಹಣದುಬ್ಬರದ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿ ಭತ್ಯೆಯಲ್ಲಿ ಶೇ.3 ರಷ್ಟು ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಚಿವ ಸಂಪುಟದಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ನೌಕರರ ಡಿಎ ಪಾವತಿಯನ್ನು ಜನವರಿ 2020ರಿಂದ ಪರಿಷ್ಕರಿಸಲಾಗಿಲ್ಲ. ಇದು 50 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಲಾಭವಾಗಲಿದೆ. ಜುಲೈ 1, 2021 ರಿಂದ ಸರ್ಕಾರವು ಭತ್ಯೆಯ ಭತ್ಯೆಯನ್ನು 28 ಪ್ರತಿಶತದಷ್ಟು ಹೆಚ್ಚಿಸಿದೆ.