ಮೃತರನ್ನು ಸಂಗತ್ ರಾಮ್ (65), ಅವರ ಪತ್ನಿ ಮಹೀಂದ್ರಾ ಕೌರ್, ಸುಖ್ವಿಂದರ್ ಸಿಂಗ್ (34) ಮತ್ತು ಅವರ ಪತ್ನಿ ರೀನಾ ಎಂದು ಗುರುತಿಸಲಾಗಿದೆ. ಮೃತರಲ್ಲಿ ಸುಖ್ವಿಂದರ್ ಸಿಂಗ್ ಅವರ ಇಬ್ಬರು ಪುತ್ರಿಯರಾದ ಅಶು (5) ಮತ್ತು ಜಸ್ಸಿ (7) ಕೂಡ ಸೇರಿದ್ದಾರೆ.
ಕುಟುಂಬದ ಇಬ್ಬರು ಮಕ್ಕಳು ಸೇರಿದಂತೆ ಆರು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಅಪರಾಧ ತಂಡದ ಪೊಲೀಸರನ್ನು ಕರೆಯಲಾಗಿದೆ. ಸ್ಥಳದಲ್ಲಿ ಆತ್ಮಹತ್ಯಾ ಪತ್ರ ದೊರೆತಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಅಂಬಾಲಾದ ಉಪ ಪೊಲೀಸ್ ವರಿಷ್ಠಾಧಿಕಾರಿ ಜೋಗಿಂದರ್ ಶರ್ಮಾ ತಿಳಿಸಿದ್ದಾರೆ.
ತಿಂಗಳ ಆರಂಭದಲ್ಲಿ ಇದೇ ರೀತಿಯ ಘಟನೆಯಲ್ಲಿ, ಜಮ್ಮುವಿನ ಸಿದ್ರಾ ಪ್ರದೇಶದಲ್ಲಿ ಒಂದೇ ಕುಟುಂಬದ ಆರು ಸದಸ್ಯರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು.
“ಜಮ್ಮುವಿನ ಸಿದ್ರಾ ಪ್ರದೇಶದ ಅವರದ್ದೇ ನಿವಾಸದಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿದ್ದಾರೆ” ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.