Saturday, 14th December 2024

ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಏಳು ಮಂದಿ ಸಾವು

ಉತ್ತರ ಪ್ರದೇಶ: ನೌಜಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಯಮುನಾ ಎಕ್ಸ್‌ ಪ್ರೆಸ್‌ವೇ 68 ರಲ್ಲಿ ಶನಿವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಿಟ್​ ಆಯಂಡ್​ ರನ್​ ಅಪಘಾತದಲ್ಲಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಮಥುರಾ ಜಿಲ್ಲಾಸ್ಪತ್ರೆಗೆ ರವಾನಿಸಿದರು.

ಕಾರು ದೆಹಲಿಯಿಂದ ಆಗ್ರಾಕ್ಕೆ ಹೋಗುತ್ತಿದ್ದ ಸಂದರ್ಭ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಮಹಿಳೆಯರು, ಮೂವರು ಪುರುಷರು ಹಾಗೂ ಮಗುವೊಂದು ಸೇರಿ ಎಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಗಾಯಾಳುಗಳನ್ನು ಮಥುರಾ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪರಿಚಿತ ವಾಹನವೊಂದು ಕಾರಿಗೆ ಡಿಕ್ಕಿ ಹೊಡೆ ದಿದೆ. ಕಾರು ಸವಾರರು ದೆಹಲಿಯಿಂದ ಆಗ್ರಾಕ್ಕೆ ಹೋಗುತ್ತಿದ್ದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.