Friday, 22nd November 2024

ಚಂದಾ ಕೊಚ್ಚರ್ ಪತಿ ದೀಪಕ್ ಕೊಚ್ಚರ್’ಗೆ ಜಾಮೀನು

ಮುಂಬೈ: ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಪತಿ ದೀಪಕ್ ಕೊಚ್ಚರ್ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ಜಾಮೀನು ನೀಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿದ್ದ ದೀಪಕ್ ಕೊಚ್ಚಾರ್‌ರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಂಧಿಸಿದ್ದರು. ವಿಡಿಯೊಕಾನ್‌ ಸಮೂಹಕ್ಕೆ ಬ್ಯಾಂಕ್‌ನಿಂದ ಸಾಲ ನೀಡುವ ಮೂಲಕ ಅಕ್ರಮ ಹಣ ವರ್ಗಾವಣೆಗೆ ನೆರವು ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಆ ಹಿನ್ನೆಲೆಯಲ್ಲಿ ಕೊಚ್ಚಾರ್‌ ದಂಪತಿಯ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 2020ರ ಆರಂಭದಲ್ಲಿ ಚಂದಾ ಅವರಿಗೆ ಸೇರಿದ್ದ ₹78 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದರು.

ವಿಡಿಯೊಕಾನ್ ಸಂಸ್ಥೆಯು 2009ರಿಂದ 2011ರ ನಡುವೆ ಐಸಿಐಸಿಐ ಬ್ಯಾಂಕ್‌ನಿಂದ ₹1,875 ಕೋಟಿ ಹಣವನ್ನು ಸಾಲ ಪಡೆದಿತ್ತು. ವಿಡಿಯೊಕಾನ್ ದೀಪಕ್ ಕೊಚ್ಚಾರ್‌ ಹಾಗೂ ಚಂದಾ ಕೊಚ್ಚಾರ್ ನೇತೃತ್ವದ ನುಪವರ್ ಕಂಪೆನಿಯಲ್ಲಿ ಹಣ ಹೂಡಿಕೆ ಮಾಡಿತ್ತು. ಇದಾದ ಹತ್ತು ತಿಂಗಳ ನಂತರ ಸಿಬಿಐ ಪ್ರಾಥಮಿಕ ತನಿಖೆ ಕೈಗೊಂಡಿತ್ತು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily