Monday, 16th September 2024

ಕೋವಿಡ್ ಎಫೆಕ್ಟ್: ಅಯೋಧ್ಯೆಯಲ್ಲಿ ದೀಪೋತ್ಸವ ಒಂದು ದಿನಕ್ಕೆ ಸೀಮಿತ

ಅಯೋಧ್ಯೆ: ಅಯೋಧ್ಯೆಯಲ್ಲಿ ಆಚರಿಸಲಾಗುವ ಬಹುನಿರೀಕ್ಷಿತ ದೀಪೋತ್ಸವ ಕಾರ್ಯಕ್ರಮವನ್ನು ಕೋವಿಡ್-19 ಸಾಂಕ್ರಾ ಮಿಕ ಹಿನ್ನೆಲೆಯಲ್ಲಿ ಕೇವಲ ಒಂದು ದಿನಕ್ಕೆ ಸೀಮಿತಗೊಳಿಸಲಾಗಿದೆ.

ಇಂದಿನಿಂದ 3 ದಿನಗಳ ಕಾಲ ಕಾರ್ಯಕ್ರಮ ನಡೆಯುತ್ತದೆ ಎಂದು ಬುಧವಾರ ಅಧಿಕಾರಿಗಳು ಹೇಳಿದ್ದರು. ಆದರೆ ಕೋವಿಡ್‍ -19 ಸಾಂಕ್ರಾಮಿಕವನ್ನು ಪರಿಗಣಿಸಿ ಕೇವಲ ಒಂದು ದಿನಕ್ಕೆ ಕಾರ್ಯಕ್ರಮ ಮೊಟಕುಗೊಳಿಸಲಾಗಿದೆ.

ನ.13 ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪುಷ್ಪಕ ವಿಮಾನದ ಮೂಲಕ ಆಗಮಿಸುವ ಶ್ರೀರಾಮ, ಸೀತಾಮಾತೆ, ಲಕ್ಷ್ಮಣರನ್ನು ಸಾಂಕೇತಿಕವಾಗಿ ಸ್ವಾಗತಿಸಲಿದ್ದಾರೆ. ಇಂದಿನ ಮತ್ತು ನಾಳೆಯ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *