Friday, 22nd November 2024

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಸಮನ್ಸ್ ಜಾರಿ

ಪಾಟ್ನಾ: ಮೋದಿ ಉಪನಾಮದ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಸಲ್ಲಿಸಲಾದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ದಂತೆ ಪಾಟ್ನಾದ ನ್ಯಾಯಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಏ.25ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಇಲ್ಲಿನ ಜನಪ್ರತಿನಿಧಿ ಗಳ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಜನಪ್ರತಿನಿಧಿಗಳ ನ್ಯಾಯಾಲಯದ ವಿಶೇಷ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆದಿ ದೇವ್ ಅವರು, ಮಾರ್ಚ್ 18 ರಂದು ನೀಡಿದ ಆದೇಶದಲ್ಲಿ ಏ.12 ರಂದು ಹಾಜರಾಗು ವಂತೆ ರಾಹುಲ್ ಗಾಂಧಿಗೆ ತಿಳಿಸಿತ್ತು.
ಬುಧವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ ಪ್ರತಿವಾದಿ ವಕೀಲರು, ಇಡೀ ತಂಡವು ಸೂರತ್ ಪ್ರಕರಣದಲ್ಲಿ ನಿರತವಾಗಿದೆ ಎಂದು ತಿಳಿಸಿ ಮತ್ತೊಂದು ದಿನಾಂಕವನ್ನು ಕೋರಿದರು. ಇದಕ್ಕೆ ನ್ಯಾಯಾಧೀಶರು, ಏ.25ರಂದು ಪ್ರಕರಣದ ಮುಂದಿನ ವಿಚಾ ರಣೆಯ ದಿನಾಂಕದಂದು ನ್ಯಾಯಾಲಯದ ಮುಂದೆ ಭೌತಿಕ ಹಾಜರಾತಿಯನ್ನು ಖಚಿತಪಡಿಸಿ ಕೊಳ್ಳಲು ರಾಹುಲ್ ಗಾಂಧಿಯವರ ವಕೀಲರನ್ನು ಕೇಳಿದರು.
ಸೂರತ್ ನ್ಯಾಯಾಲಯವು ಇತ್ತೀಚೆಗೆ ಉದ್ದೇಶಿತ ಹೇಳಿಕೆಯ ಮೇಲೆ ರಾಹುಲ್ ಗಾಂಧಿಯವರನ್ನು ದೋಷಿ ಎಂದು ಘೋಷಿಸಿತು ಮತ್ತು ನಂತರ ಅವರನ್ನು ಲೋಕಸಭೆಯ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಯಿತು.