Thursday, 12th December 2024

ಮಾನನಷ್ಟ ಮೊಕದ್ದಮೆ ಪ್ರಕರಣ: ರಾಹುಲ್‌ ಗಾಂಧಿಗೆ ಹಿನ್ನಡೆ

ಅಹಮದಾಬಾದ್: ಮೋದಿ ಉಪನಾಮೆ ಕುರಿತು ವಿವಾದಾತ್ಮಕ ಹೇಳಿಕೆ ಕುರಿತಾದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ ಹೈಕೋರ್ಟ್‌ನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಹಿನ್ನಡೆಯಾಗಿದೆ.

ಸೆಷನ್ಸ್‌ ನ್ಯಾಯಾಲಯ ನೀಡಿರುವ ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು  ಗುಜರಾತ್ ಹೈಕೋರ್ಟ್ ವಜಾಗೊಳಿಸಿತು. ಹೀಗಾಗಿ, ಸಂಸದ ಸ್ಥಾನದ ಅನರ್ಹತೆ ಮತ್ತು ಶಿಕ್ಷೆ ಮುಂದುವರೆದಿದೆ.

ಗುಜರಾತ್ ಹೈಕೋರ್ಟ್​ನಲ್ಲಿಂದು ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ರಾಹುಲ್‌ ಅರ್ಜಿ ವಜಾಗೊಳಿಸಿದರು. ಈ ವಿಚಾರಣೆಯ ಬಳಿಕ ರಾಹುಲ್ ಗಾಂಧಿ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದ್ದು, ಶಿಕ್ಷೆಯನ್ನು ಯಥಾಸ್ಥಿತಿಯಲ್ಲಿ ಇರಿಸಲಾಗಿದೆ. ರಾಹುಲ್ ಪರ ವಕೀಲರು ಸುಪ್ರೀಂ ಕೋರ್ಟ್‌ನಲ್ಲಿ ತೀರ್ಪು ಪ್ರಶ್ನಿಸುವ ಸಾಧ್ಯತೆ ಹೆಚ್ಚಿದೆ.

“ಕೆಳ ಹಂತದ ನ್ಯಾಯಾಲಯದ ತೀರ್ಪು ಸರಿಯಾಗಿದೆ. ಇದರಲ್ಲಿ ಮಧ್ಯಪ್ರವೇಶಿಸುವುದು ಸೂಕ್ತವಲ್ಲ” ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತು. ಹೀಗಾಗಿ, ಮೋದಿ ಉಪನಾಮೆ ಹೇಳಿಕೆಯ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಗುಜರಾತ್ ಹೈಕೋರ್ಟ್‌ನಿಂದ ದೊಡ್ಡ ಹಿನ್ನಡೆಯಾಗಿದೆ. ಬಂಧಿಸಿದಂತೆ ಅರ್ಜಿ ಸಲ್ಲಿಸಿದ್ದಾರೆ.