ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಮಾಹಿತಿ ನೀಡಿದ್ದು, ‘ಸುರಕ್ಷತಾ ಮಾನದಂಡಗಳನ್ನು ಅಳವಡಿಸಿಕೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದರೆ ಎಲೆಕ್ಟ್ರಿಕ್ ವಾಹನ ತಯಾರಕರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.
ಯಾವುದೇ ಕಂಪನಿಯು ತಮ್ಮ ಪ್ರಕ್ರಿಯೆಗಳಲ್ಲಿ ನಿರ್ಲಕ್ಷ್ಯ ತೋರಿದರೆ ಭಾರೀ ದಂಡ ವಿಧಿಸಲಾಗುತ್ತದೆ. ಪ್ರತಿಯೊಬ್ಬ ಪ್ರಯಾಣಿ ಕರ ಸುರಕ್ಷತೆಗೆ ಸರ್ಕಾರ ಬದ್ಧವಾಗಿರಲಿದೆ. ದೋಷಯುಕ್ತ ವಾಹನಗಳನ್ನು ತಕ್ಷಣವೇ ಹಿಂಪಡೆಯಲು ಕಂಪನಿಗಳು ಕ್ರಮ ಕೈಗೊಳ್ಳ ಬಹುದು ಎಂದು ಹೇಳಿದ್ದಾರೆ.
ಹಲವು ಅವಘಡಗಳು ಕಳೆದ ಎರಡು ತಿಂಗಳುಗಳಲ್ಲಿ ಬೆಳಕಿಗೆ ಬಂದಿವೆ. ಕೆಲವರು ಪ್ರಾಣ ಕಳೆದುಕೊಂಡಿರುವುದು ಮತ್ತು ಹಲವರು ಗಾಯಗೊಂಡಿರುವುದು ಅತ್ಯಂತ ದುರದೃಷ್ಟಕರ ಎಂದೂ ಹೇಳಿದರು.
ಘಟನೆಗಳ ಬಗ್ಗೆ ತನಿಖೆ ನಡೆಸಲು ಮತ್ತು ಭವಿಷ್ಯದಲ್ಲಿ ಇಂತಹ ಪ್ರಕರಣಗಳು ಸಂಭವಿಸದಂತೆ ತಡೆಯಲು/ ಶಿಫಾರಸುಗಳನ್ನು ಮಾಡಲು ರಸ್ತೆ ಸಾರಿಗೆ ಸಚಿವಾಲಯ ಈಗಾಗಲೇ ತಜ್ಞರ ತಂಡವನ್ನು ರಚಿಸಿದೆ.