Wednesday, 11th December 2024

ದೋಷಪೂರಿತ ವಾಹನ ಹಿಂಪಡೆಯಿರಿ: ಸಚಿವ ಗಡ್ಕರಿ ಎಚ್ಚರಿಕೆ

ನವದೆಹಲಿ: ಎಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಹಾಗೂ ಬ್ಯಾಟರಿ ಸ್ಫೋಟ ಗೊಳ್ಳುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರವು,  ದೋಷಪೂರಿತ ವಾಹನಗಳನ್ನು ಹಿಂಪಡೆಯುವಂತೆ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ದು, ದಂಡ ವಿಧಿಸುವುದಾಗಿ ಹೇಳಿದೆ.

ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಮಾಹಿತಿ ನೀಡಿದ್ದು, ‘ಸುರಕ್ಷತಾ ಮಾನದಂಡಗಳನ್ನು ಅಳವಡಿಸಿಕೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದರೆ ಎಲೆಕ್ಟ್ರಿಕ್ ವಾಹನ ತಯಾರಕರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.

ಘಟನೆಗಳ ಬಗ್ಗೆ ತನಿಖೆ ನಡೆಸಲು ಮತ್ತು ಭವಿಷ್ಯದಲ್ಲಿ ಇಂತಹ ಪ್ರಕರಣಗಳು ಸಂಭವಿಸದಂತೆ ತಡೆಯಲು/ ಶಿಫಾರಸುಗಳನ್ನು ಮಾಡಲು ರಸ್ತೆ ಸಾರಿಗೆ ಸಚಿವಾಲಯ ಈಗಾಗಲೇ ತಜ್ಞರ ತಂಡವನ್ನು ರಚಿಸಿದೆ.