Sunday, 15th December 2024

ಅಗ್ನಿವೀರರಿಗೆ ರಕ್ಷಣಾ ಸಚಿವಾಲಯದಲ್ಲಿ ಶೇ.10ರಷ್ಟು ಹುದ್ದೆಗಳ ಪ್ರಸ್ತಾವನೆಗೆ ಸಚಿವರ ಅನುಮೋದನೆ

ನವದೆಹಲಿ: ಅಗ್ನಿವೀರರಿಗೆ ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ಶೇ.10ರಷ್ಟು ಹುದ್ದೆಗಳನ್ನ ಮೀಸಲಿಡುವ ಪ್ರಸ್ತಾವನೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಅನುಮೋದನೆ ನೀಡಿದ್ದಾರೆ.

ಭಾರತೀಯ ಕೋಸ್ಟ್ ಗಾರ್ಡ್ ಮತ್ತು ರಕ್ಷಣಾ ನಾಗರಿಕ ಹುದ್ದೆಗಳು ಮತ್ತು ಎಲ್ಲಾ 16 ರಕ್ಷಣಾ ಸಾರ್ವಜನಿಕ ವಲಯದ ಸಂಸ್ಥೆ ಗಳಲ್ಲಿ ಶೇ.10ರಷ್ಟು ಮೀಸಲಾತಿಯನ್ನು ಜಾರಿಗೆ ತರಲಾಗುವುದು ಎಂದು ಸಚಿವಾಲಯ ಟ್ವೀಟ್ ಮಾಡಿದೆ.

‘ಈ ನಿಬಂಧನೆಗಳನ್ನ ಜಾರಿಗೆ ತರಲು ಸಂಬಂಧಿತ ನೇಮಕಾತಿ ನಿಯಮಗಳಿಗೆ ಅಗತ್ಯ ತಿದ್ದುಪಡಿಗಳನ್ನು ಕೈಗೊಳ್ಳಲಾಗುವುದು. ರಕ್ಷಣಾ ಸಾರ್ವಜನಿಕ ವಲಯದ ಉದ್ದಿಮೆಗಳು ತಮ್ಮ ನೇಮಕಾತಿ ನಿಯಮಗಳಿಗೆ ಇದೇ ರೀತಿಯ ತಿದ್ದುಪಡಿಗಳನ್ನು ಮಾಡಲು ಸಲಹೆ ನೀಡಲಾಗುವುದು. ಅಗತ್ಯ ವಯೋಮಿತಿ ಸಡಿಲಿಕೆಯನ್ನು ಸಹ ಮಾಡಲಾಗುವುದು’ ಎಂದು ಸಚಿವಾಲಯ ತಿಳಿಸಿದೆ.