ಡೆಹ್ರಾಡೂನ್: ಬಾಲಕಿಯನ್ನು ಇಬ್ಬರು ವ್ಯಕ್ತಿಗಳು ಅಪಹರಣ ಯತ್ನ ನಡೆಸಿದ ಆರೋಪದ ನಂತರ ಉಂಟಾಗಿ ರುವ ಉದ್ವಿಗ್ನತೆ ಪರಿಸ್ಥಿತಿಯ ನಡುವೆಯೇ ಉತ್ತರಾಖಂಡದ ಉತ್ತರಕಾಶಿ ಪಟ್ಟಣದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಜೂನ್ 15 ರೊಳಗೆ ಅಂಗಡಿಗಳನ್ನು ಖಾಲಿ ಮಾಡಬೇಕು, ಇಲ್ಲದೇ ಇದ್ದರೆ ಅಂಗಡಿ ಮುಚ್ಚುವುದಾಗಿ ಬೆದರಿಕೆ ಹಾಕುವ ಪೋಸ್ಟರ್‌ಗಳು ಕಾಣಿಸಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಪಾದಿತ ಅಪಹರಣ ಯತ್ನಕ್ಕಾಗಿ ಸ್ಥಳೀಯ ಅಂಗಡಿಯ ಉಬೇದ್ ಖಾನ್ (24) ಹಾಗೂ ಮೋಟಾರ್ ಸೈಕಲ್ ಮೆಕ್ಯಾನಿಕ್ ಜಿತೇಂದರ್ ಸೈನಿ (23) ಇಬ್ಬರನ್ನೂ ಬಂಧಿಸಲಾಯಿತು. ಸ್ಥಳೀಯ ನಿವಾಸಿಗಳು ಇದು ‘ಲವ್ ಜಿಹಾದ್’ ಪ್ರಕರಣ ಎಂದು ಆರೋಪಿಸಿದ್ದಾರೆ.
ಉತ್ತರಕಾಶಿಯ ಪುರೋಲಾ ಮುಖ್ಯ ಮಾರುಕಟ್ಟೆಯಲ್ಲಿ ನಡೆಯುವ ಮಹಾಪಂಚಾಯತ್‌ಗೆ ಮುನ್ನ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಖಾಲಿ ಮಾಡುವಂತೆ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ.
ಸಂಘ ಪರಿವಾರದ ಸದಸ್ಯರು ಬಾರ್ಕೋಟ್‌ನಲ್ಲಿ ಪ್ರತಿಭಟನೆ ನಡೆಸಿ ಮುಸ್ಲಿಮರಿಗೆ ಸೇರಿದ ಅಂಗಡಿಗಳು ಹಾಗೂ ಮನೆಗಳ ಮೇಲೆ ದಾಳಿ ನಡೆಸಿದ ಎರಡು ದಿನಗಳ ನಂತರ ಪೋಸ್ಟರ್‌ಗಳು ಕಾಣಿಸಿಕೊಂಡಿವೆ. ಹಿಂಸಾಚಾರದ ಹಿಂದೆ ಇರುವವರನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ