Friday, 22nd November 2024

ಡೆಲ್ಲಿ ಚಲೋ: 6ನೇ ಸುತ್ತಿನ ಮಾತುಕತೆ ರದ್ದು, 14ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ನವದೆಹಲಿ: ರೈತ ಸಂಘಟನೆಗಳೊಂದಿಗೆ ಬುಧವಾರ ನಡೆಸಬೇಕಿದ್ದ 6ನೇ ಸುತ್ತಿನ ಮಾತುಕತೆಯನ್ನು ಕೇಂದ್ರ ಸರ್ಕಾರ ರದ್ದು ಗೊಳಿಸಿದೆ.

ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಡೆದ ಮಾತುಕತೆ ವಿಫಲವಾದ ನಂತರ ರೈತ ಮುಖಂಡರು ಮಾತುಕತೆಯಲ್ಲಿ ಭಾಗಿ ಯಾಗಲು ನಿರಾಕರಿಸಿದರು. ಹೀಗಾಗಿ, ಕೇಂದ್ರ ಸರ್ಕಾರ ರೈತ ಮುಖಂಡರೊಂದಿಗೆ ನಡೆಯಬೇಕಿದ್ದ 6ನೇ ಸುತ್ತಿನ ಸಭೆಯನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಕೃಷಿ ಸಚಿವಾಲಯ ವಕ್ತಾರರು ತಿಳಿಸಿದ್ದಾರೆ

ಸಭೆಯಲ್ಲಿ ಅಮಿತ್ ಶಾ ಅವರು ಮೂರೂ ವಿಧೇಯಕಗಳಿಗೆ ತಿದ್ದುಪಡಿ ಮಾಡುವ ಪ್ರಸ್ತಾವನೆಯನ್ನು ಮುಂದಿಟ್ಟರು. ಅದಕ್ಕೆ ರೈತ ಸಂಘಟನೆ ಪ್ರತಿನಿಧಿಗಳು ಒಪ್ಪಲಿಲ್ಲ.

ಇನ್ನೊಂದೆಡೆ ಇಂದು ಮಧ್ಯಾಹ್ನ 12 ಗಂಟೆಗೆ ದೆಹಲಿ-ಹರ್ಯಾಣದ ಸಿಂಘು ಗಡಿಭಾಗದಲ್ಲಿ ಎಲ್ಲಾ ರೈತ ಸಂಘಟನೆಗಳ ಪ್ರತಿನಿಧಿ ಗಳು ಸೇರಿ ತಮ್ಮ ಮುಂದಿನ ನಡೆಯ ಬಗ್ಗೆ ಚರ್ಚಿಸಲಿದ್ದಾರೆ. ರೈತರು ಇಂದು ಕೂಡ ತಮ್ಮ ಪ್ರತಿಭಟನೆ ಮುಂದುವರಿಸಿದ್ದು 14ನೇ ದಿನಕ್ಕೆ ಕಾಲಿಟ್ಟಿದೆ.