ನವದೆಹಲಿ : ದೆಹಲಿ ಪೊಲೀಸರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ವಕ್ತಾರ ಭಾರದ್ವಾಜ್, ದೆಹಲಿ ಪೊಲೀಸರು ಕೇಜ್ರೀವಾಲ್ ರನ್ನು ಗೃಹಬಂಧನ ದಲ್ಲಿಇರಿಸಿದೆ. ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ದೆಹಲಿ ಪೊಲೀಸರು ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಸಿಂಗ್ಯೂ ಬಾರ್ಡರ್ ನಲ್ಲಿ ರೈತರನ್ನು ಭೇಟಿ ಮಾಡಿದ ನಂತರ ಗೃಹ ಬಂಧನದಲ್ಲಿರಿಸಲಾಗಿದೆ. ಭಾರಿ ಬ್ಯಾರಿಕೇಡ್ ಗಳಿದ್ದು, ಮನೆ ಕೆಲಸದಾಳು ಕೂಡ ಮನೆಯೊಳಗೆ ಪ್ರವೇಶ ನೀಡುತ್ತಿಲ್ಲ’ ಎಂದು ಅವರು ಆರೋಪಿಸಿದರು.
ಸಿಎಂ ನಿವಾಸದತ್ತ ನಾವೆಲ್ಲರೂ ಪಾದಯಾತ್ರೆ ನಡೆಸಿ, ಮುಖ್ಯಮಂತ್ರಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.