Friday, 22nd November 2024

ದೆಹಲಿಯಲ್ಲಿ ಲಾಕ್ ಡೌನ್ ವಿಸ್ತರಣೆ

Arvind Kejrival

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭಾನುವಾರ ದೆಹಲಿಯಲ್ಲಿ ಸತತ ಐದನೇ ಬಾರಿಗೆ ಲಾಕ್ ಡೌನ್ ವಿಸ್ತರಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ 1,600 ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಕೋವಿಡ್-19 ಪ್ರಕರಣಗಳು ಕಡಿಮೆಯಾಗುತ್ತಾ ಹೋದರೆ, ಸರ್ಕಾರ ಮೇ 31 ರಿಂದ ಹಂತ ಹಂತವಾಗಿ ದೆಹಲಿಯನ್ನು ಅನ್ ಲಾಕ್ ಮಾಡಲು ಪ್ರಾರಂಭಿಸುತ್ತದೆ ಎಂದು ಕೇಜ್ರಿವಾಲ್ ಹೇಳಿದರು.

ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆ ಇದೆ. ನಾವು ಸಾಧ್ಯವಾದಷ್ಟು ಬೇಗ ಎಲ್ಲರಿಗೂ ಲಸಿಕೆ ಹಾಕಲು ಯೋಜಿಸುತ್ತಿದ್ದೇವೆ. ಲಸಿಕೆಗಳಿಗೆ ಸಂಬಂಧಿಸಿದಂತೆ ನಾನು ದೇಶೀಯ ಮತ್ತು ವಿದೇಶಿ ಕಂಪನಿಗಳೊಂದಿಗೆ ಮಾತುಕತೆ ಮಾಡುತ್ತಿದ್ದೇನೆ. ನಾವು ನಮ್ಮ ಬಜೆಟ್ ನಿಂದ ಖರ್ಚು ಮಾಡಲು ಸಿದ್ಧರಿದ್ದೇವೆ ಎಂದು ಹೇಳಿದರು.