Friday, 22nd November 2024

ದೆಹಲಿ ಹಿಂಸಾಚಾರ: ಜೆಎನ್‌ಯು, ಜಾಮಿಯಾ ವಿದ್ಯಾರ್ಥಿಗಳಿಗೆ ಜಾಮೀನು

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಕಳೆದ ವರ್ಷದ ಫೆಬ್ರುವರಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸ ಲಾಗಿದ್ದ ಜವಾಹರ್‌ಲಾಲ್‌ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ವಿದ್ಯಾರ್ಥಿಗಳಾದ ನತಾಶಾ ನರ್ವಾಲ್ ಮತ್ತು ದೇವಂಗನಾ ಕಲಿತಾ ಮತ್ತು ಜಾಮಿಯಾ ವಿದ್ಯಾಲಯದ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್‌ ಮಂಗಳವಾರ ಜಾಮೀನು ನೀಡಿದೆ.

ಮೂವರು ವಿದ್ಯಾರ್ಥಿಗಳನ್ನು ಕಳೆದ ವರ್ಷ ಮೇ ತಿಂಗಳಲ್ಲಿ ‘ಕಠಿಣ ಕಾನೂನು ಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ’ ಅಡಿ ಪೊಲೀಸರು ಬಂಧಿಸಿ ದ್ದರು. ಮೂವರು ಆರೋಪಿಗಳಿಗೆ ಜಾಮೀನು ನೀಡಲು ವಿಚಾರಣಾ ನ್ಯಾಯಾ ಲಯ ನಿರಾಕರಿಸಿತ್ತು. ಈ ಆದೇಶದ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಆರೋಪಿಗಳು ಮೇಲ್ಮನವಿ ಸಲ್ಲಿಸಿದ್ದರು.

ಈ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮೃದುಲ್ ಮತ್ತು ಅನೂಪ್ ಜೈರಾಮ್ ಬಂಭಾನಿ ಅವರನ್ನೊಳಗೊಂಡ ನ್ಯಾಯಪೀಠ, ಮೂವರು ಆರೋಪಿಗಳಿಗೆ ಜಾಮೀನು ನೀಡಿದೆ.

ಜಾಮೀನು ನೀಡುವ ವೇಳೆ ನ್ಯಾಯಾಲಯ, ತಮ್ಮ ಪಾಸ್‌ಪೋರ್ಟ್‌ಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ನಿರ್ದೇಶನ ನೀಡಿತು. ಜತೆಗೆ, ಸಾಕ್ಷ್ಯಗಳನ್ನು ಪ್ರಚೋದಿಸಬಾರದು ಮತ್ತು ನಾಶ ಮಾಡಬಾರದು ಎಂದು ಸೂಚಿಸಿತು.