Saturday, 14th December 2024

ಲಸಿಕೆ ಪಡೆಯಲು ಬಲವಂತ ಪಡಿಸುವಂತಿಲ್ಲ: ದೆಹಲಿ ಹೈಕೋರ್ಟ್

ನವದೆಹಲಿ: ದ್ಯೋಗಿಗೆ ಕೋವಿಡ್ -19 ಲಸಿಕೆ ಪಡೆಯಲು ಬಲವಂತ ಪಡಿಸುವಂತಿಲ್ಲ ಎಂದು ದೆಹಲಿ ಹೈ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಕರ್ತವ್ಯಕ್ಕೆ ಅವಕಾಶ ನಿರಾಕರಿಸಲಾಗಿದ್ದ ಉದ್ಯೋಗಿಗೆ 30 ದಿನಗಳೊಳಗಾಗಿ ಮರಳಿ ಪಡೆಯುವಂತೆ ನಿರ್ದೇಶಿಸಿದೆ. ಕೋವಿಡ್- 19 ಲಸಿಕೆ ತಮಗೆ ಬಲವಂತಪಡಿಸಲಾಗುತ್ತಿದ್ದು, ಕರ್ತವ್ಯ ನಿರ್ವಹಣೆಗೆ ಅವಕಾಶ ನೀಡುತ್ತಿಲ್ಲ ಎಂದು ಶಿಕ್ಷಕರೊಬ್ಬರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ಈ ವಿಚಾರಣೆ ವೇಳೆ ಮಹತ್ವದ ತೀರ್ಪು ಹೊರ ಬಿದ್ದಿದೆ.

ಶಿಕ್ಷಕರಿಗೆ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡುವಂತೆ ಆದೇಶಿಸಿದೆ.ಈ ಹಿಂದೆಯೂ ಜಾಕೋಬ್ ಎಂಬವರು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಈ ಪ್ರಕರಣದ ವಿಚಾರಣೆ ವೇಳೆ ಲಸಿಕೆ ತೆಗೆದುಕೊಳ್ಳುವುದು ಸೇರಿದಂತೆ ಆರೋಗ್ಯಕ್ಕೆ ಸಂಬಂಧಿಸಿದ ಚಿಕಿತ್ಸೆ ಪ್ರತಿಯೊಬ್ಬರ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದ್ದು ಎಂದು ಅಭಿಪ್ರಾಯಪಟ್ಟಿತ್ತು.