ನವದೆಹಲಿ: ದೆಹಲಿಯ NCRನ ಕೆಲವು ಭಾಗಗಳಲ್ಲಿ ಭಾರೀ ಮಳೆ ಸುರಿದಿದ್ದು, ಕೆಲವು ಭಾಗಗಳು ಜಲಾವೃತವಾಗಿವೆ. ಈ ಹಿನ್ನೆಲೆ, ದೆಹಲಿ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಕಟಣೆಯ ಪ್ರಕಾರ, ಭಾರೀ ಮಳೆಯಿಂದಾಗಿ ದೆಹಲಿ ಎನ್ಸಿಆರ್, ಗುರ್ಗಾಂವ್, ಫರಿದಾಬಾದ್, ಗಾಜಿಯಾಬಾದ್ ಮತ್ತು ನೋಯ್ಡಾದ ಎಲ್ಲಾ ಶಾಲೆಗಳಿಗೆ ಜು.10ರಂದು ರಜೆ ಘೋಷಿಸಲಾಗಿದೆ.
ʻಕಳೆದ 2 ದಿನಗಳಿಂದ ದೆಹಲಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಹವಾ ಮಾನ ಇಲಾಖೆಯ ಎಚ್ಚರಿಕೆಗಳನ್ನು ಗಮನದಲ್ಲಿಟ್ಟುಕೊಂಡು, ದೆಹಲಿಯ ಎಲ್ಲಾ ಶಾಲೆ ಗಳನ್ನು ಇಂದು ಒಂದು ದಿನ ಮುಚ್ಚಲಾಗುವುದುʼ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಕಳೆದ ಎರಡು ದಿನಗಳಿಂದ ಉತ್ತರಾಖಂಡ, ಹಿಮಾಚಲ ಪ್ರದೇಶ, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಪಂಜಾಬ್ನ ಅನೇಕ ಪ್ರದೇಶಗಳಲ್ಲಿ ನಿರಂತರ ಮಳೆಯಾಗಿದೆ.