Saturday, 14th December 2024

ಫೆ.22 ರಂದು ದೆಹಲಿ ಮೇಯರ್ ಚುನಾವಣೆಗೆ ಮುಹೂರ್ತ ನಿಗದಿ

ವದೆಹಲಿ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ದೆಹಲಿ ಮೇಯರ್ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಫೆಬ್ರವರಿ 22 ರಂದು ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ.

ನಾಮನಿರ್ದೇಶಿತ ಸದಸ್ಯರಿಗೆ ಮತದಾನಕ್ಕೆ ಅವಕಾಶ ಇರುವುದಿಲ್ಲ. ಕೂಡಲೇ ಚುನಾವಣೆ ನಡೆಸಬೇಕು ಎಂದು ಕೋರ್ಟ್ ಆದೇಶ ಹೊರಡಿಸಿದ್ದ ಬೆನ್ನಲ್ಲೇ ಮೇಯರ್ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿಪಡಿಸಲಾಗಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಫೆಬ್ರವರಿ 22ರಂದು ಚುನಾವಣೆ ನಡೆಸುವಂತೆ ಶಿಫಾರಸ್ಸು ಮಾಡಿದ್ದು, ಉಪರಾಜ್ಯಪಾಲ ವಿ.ಕೆ. ಸಕ್ಸೇನಾ ಅವರು ಸಮ್ಮತಿ ಸೂಚಿಸಿದ್ದಾರೆ. ಮೇ 22ರಂದು ಮೇಯರ್ ಆಯ್ಕೆಯಾಗಲಿದ್ದು, ನಂತರ ಮೇಯರ್ ಅವರಿಂದಲೇ ಉಪಮೇಯರ್ ಆಯ್ಕೆ ಪ್ರಕ್ರಿಯೆ ನಡೆಯಬೇಕು ಎಂದು ಕೋರ್ಟ್ ಆದೇಶ ನೀಡಿದೆ.

ಮೂರ್ನಾಲ್ಕು ಬಾರಿ ಮೇಯರ್ ಆಯ್ಕೆ ಮುಂದೂಡಲಾಗಿತ್ತು. ನಾಮನಿರ್ದೇಶಿತರಿಗೆ ಮತದಾನ ಹಕ್ಕು ವಿಚಾರವಾಗಿ ಗೊಂದಲ ಉಂಟಾಗಿತ್ತು. ಸುಪ್ರೀಂಕೋರ್ಟ್ ಆದೇಶ ನೀಡಿ ನಾಮನಿರ್ದೇಶಕ ಸದಸ್ಯರಿಗೆ ಮತದಾನಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದೆ.