Saturday, 14th December 2024

ಸುಗ್ರೀವಾಜ್ಞೆಗೆ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರ

ನವದೆಹಲಿ: ಕೇಂದ್ರ ಸರ್ಕಾರ ಅಧಿಕಾರ ಹೊಂದುವ ಸುಗ್ರೀವಾಜ್ಞೆಯನ್ನು ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿವೆ.

ರಾಷ್ಟ್ರಪತಿ ಅಂಕಿತ ಮಾತ್ರ ಬಾಕಿ ಉಳಿದಿದೆ. ಅಧಿಕಾರಿ ಚಲಾವಣೆ ಹಗ್ಗಜಗ್ಗಾಟದಲ್ಲಿ ವಿಪಕ್ಷಗಳ ಇಂಡಿಯಾ ಕೂಟಕ್ಕೆ ತೀವ್ರ ಮುಖಭಂಗವಾದರೆ, ಮೋದಿ ಸರ್ಕಾರ ಗೆದ್ದಿದೆ.

ಭಾರೀ ವಿರೋಧ ಮತ್ತು ಸವಾಲಿನ ನಡುವೆಯೂ ದೆಹಲಿಯ ಉನ್ನತಾಧಿಕಾರಿಗಳ ನೇಮಕ, ವರ್ಗಾವಣೆ ಮತ್ತು ಕೆಲವು ವಿಶೇಷ ಅಧಿಕಾರಗಳನ್ನು ನೀಡುವ ಸುಗ್ರೀವಾಜ್ಞೆಯನ್ನು(ದೆಹಲಿ ಪ್ರದೇಶದ ಸರ್ಕಾರ ಮಸೂದೆ-2023 (ತಿದ್ದುಪಡಿ) ಕೇಂದ್ರ ಸರ್ಕಾರ ಸಂಸತ್ತಿನ ಉಭಯ ಸದನಗಳಲ್ಲಿ ಧ್ವನಿಮತದ ಮೂಲಕ ಅಂಗೀಕಾರ ಪಡೆದಿದೆ. ಮಸೂದೆ ಕಾಯ್ದೆಯಾಗಿ ಜಾರಿಗೆ ಬರಲು ರಾಷ್ಟ್ರಪತಿ ಅಂಕಿತವೊಂದೇ ಬಾಕಿ ಉಳಿದಿದೆ. ಈ ಮೂಲಕ ವಿಪಕ್ಷಗಳ ‘ಇಂಡಿಯಾ’ ಒಕ್ಕೂಟ ಹಾಕಿದ್ದ ಸವಾಲನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಯಶಸ್ವಿಯಾಗಿದೆ ದಾಟಿದೆ.