ಚೆನ್ನೈ: ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಐಪಿಎಸ್ ಅಧಿಕಾರಿ ಜಿ.ಸಂಪತ್ ಕುಮಾರ್‌ಗೆ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.
ಇದಕ್ಕೂ ಮುನ್ನ ನ್ಯಾಯಮೂರ್ತಿಗಳಾದ ಪಿಎನ್ ಪ್ರಕಾಶ್ ಮತ್ತು ಆರ್‌ಎಂಟಿ ಟೀಕಾ ರಾಮನ್ ಅವರು ಅಧಿಕಾರಿಗೆ ನೋಟಿಸ್ ನೀಡಿ ವಿವರಣೆ ನೀಡಲು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಬೆಟ್ಟಿಂಗ್ ಹಗರಣದಲ್ಲಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿಯ ಹೆಸರು ಪ್ರಸ್ತಾಪಿಸಲಾಗಿತ್ತು. ಇದರಿಂದ ಮಹೇಂದ್ರ ಸಿಂಗ್ ಅವರು 2014ರಲ್ಲಿ ಸಲ್ಲಿಸಿದ್ದ ₹100 ಕೋಟಿ ಮಾನನಷ್ಟ ಮೊಕದ್ದಮೆಯಲ್ಲಿ ಕುಮಾರ್ ನೀಡಿದ್ದ ಹೇಳಿಕೆಗಳನ್ನು ಉಲ್ಲೇಖ ಮಾಡ ಲಾಗಿತ್ತು.
ಐಪಿಎಲ್ ಬೆಟ್ಟಿಂಗ್ ಹಗರಣದ ಆರೋಪಿ ಬುಕ್ಕಿಯೊಬ್ಬರಿಂದ ಲಂಚ ಪಡೆದ ಆರೋಪದ ಮೇಲೆ 2014ರಲ್ಲಿ ಸಂಪತ್ ಕುಮಾರ್ ಅವರನ್ನು ಒಮ್ಮೆ ಅಮಾನತುಗೊಳಿಸಲಾಗಿತ್ತು. ನಂತರ, ವಿಚಾರಣೆಯು ಅವರಿಗೆ ಕ್ಲೀನ್ ಚಿಟ್ ನೀಡಲಾಗಿತ್ತು. ಬಳಿಕ ಅವರನ್ನು ಮರುನೇಮಕ ಮಾಡಲಾಗಿತ್ತು.