Sunday, 15th December 2024

ಅಹಮದ್ ಪಟೇಲ್ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ ಸಂತಾಪ

ಬೆಂಗಳೂರು: ಎಐಸಿಸಿ ಖಜಾಂಚಿ, ಕಾಂಗ್ರೆಸ್ ಹಿರಿಯ ನಾಯಕ ಅಹಮದ್ ಪಟೇಲ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಅಹಮದ್ ಪಟೇಲ್ ಅವರ ಅವರ ಅಗಲಿಕೆ ಸುದ್ದಿ ಆಘಾತ ತಂದಿದೆ. ಅಹಮದ್ ಪಟೇಲ್ ಅವರು ಕಾಂಗ್ರೆಸ್ ಪಕ್ಷದ ಶಕ್ತಿಯಾಗಿ ದ್ದರು. ತಮ್ಮ ಇಡೀ ಜೀವನವನ್ನು ಪಕ್ಷಕ್ಕೆ ಮುಡಿಪಾಗಿಟ್ಟ ನಿಷ್ಠಾವಂತ ನಾಯಕರು ಅವರು ಎಂದು ಡಿಕೆಶಿ ಸ್ಮರಿಸಿಕೊಂಡಿದ್ದಾರೆ.

ಪಕ್ಷ ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದಾಗಲೆಲ್ಲ ಬಲವಾಗಿ ನಿಲ್ಲುತ್ತಿದ್ದವರು ಅಹಮದ್ ಪಟೇಲ್ ಅವರು. ಪಕ್ಷಕ್ಕೆ ಆಧಾರ ಸ್ತಂಭ ದಂತಿದ್ದ ಹಿರಿಯ ನಾಯಕನ ಅಗಲಿಕೆ ಪಕ್ಷಕ್ಕೆ ಭರಿಸಲಾರದ ನಷ್ಟವಾಗಿದೆ. ಅಹಮದ್ ಪಟೇಲ್ ಅವರ ಜತೆ ಮೊದ ಲಿಂದಲೂ ಉತ್ತಮ ಒಡನಾಟ ಹೊಂದಿದ್ದೆ. ಅವರು ಪಕ್ಷಕ್ಕೆ ಹಾಗೂ ವೈಯಕ್ತಿಕವಾಗಿ ನನಗೆ ಮಾರ್ಗದರ್ಶಕರಾಗಿದ್ದರು. ಅವರ ಆಲೋಚನೆ, ವಿಚಾರ, ಸಿದ್ಧಾಂತಗಳು ನಮ್ಮೆಲ್ಲರಿಗೂ ಮಾದರಿಯಾಗಿತ್ತು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ ಅಹಮದ್ ಪಟೇಲ್ ವಿಧಿವಶ

ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಡಿ.ಕೆ ಶಿವಕುಮಾರ್ ತಮ್ಮ ಶೋಕಸಂದೇಶದಲ್ಲಿ ತಿಳಿಸಿದ್ದಾರೆ.