Thursday, 12th December 2024

ಲ್ಯಾಪ್‌ಟಾಪ್ ಚಾರ್ಜಿಂಗ್ ವೇಳೆ ವಿದ್ಯುತ್ ಸ್ಪರ್ಶ: ವೈದ್ಯೆ ಸಾವು

ಮಿಳುನಾಡು: ಲ್ಯಾಪ್‌ಟಾಪ್ ಚಾರ್ಜ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವೈದ್ಯೆ ಮೃತಪಟ್ಟ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ.

ಡಾ.ಸರಣಿತಾ (32) ಮೃತ ದುರ್ದೈವಿ. ಸರಣಿತಾ ತರಬೇತಿಗಾಗಿ ಚೆನ್ನೈನ ಕಿಲ್ಪಾಕ್ಕಂ ಮನೋವೈದ್ಯಕೀಯ ಆಸ್ಪತ್ರೆಯಲ್ಲಿ ಟ್ರೈನಿ ಡಾಕ್ಟರ್ ಆಗಿ ಬಂದಿದ್ದರು. ಹೀಗಾಗಿ ಅಯನವರಂನ ಹಾಸ್ಟೆಲ್‌ನಲ್ಲಿ ತಂಗಿದ್ದರು. ಹಾಸ್ಟೆಲ್ ಕೊಠಡಿಯಲ್ಲಿ ಲ್ಯಾಪ್ ಟಾಪ್ ಚಾರ್ಜ್ ಮಾಡಲು ಯತ್ನಿಸುತ್ತಿದ್ದಾಗ ಆಕೆಗೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಸರನಿತಾ ಅವರನ್ನು ಆಕೆಯ ಪತಿ ಮೊಬೈಲ್ ಮೂಲಕ ಸಂಪರ್ಕಿಸಿದ್ದರು. ಆದರೆ ಬಹಳ ಹೊತ್ತಾದರೂ ಫೋನ್ ತೆಗೆಯಲಿಲ್ಲ. ಬಳಿಕ ಸರನಿತಾ ಅವರ ಪತಿ ಅವರು ತಂಗಿದ್ದ ಹೊಟೇಲ್ ಆಡಳಿತ ಮಂಡಳಿಗೆ ಕರೆ ಮಾಡಿ ಆಕೆಯ ಕೊಠಡಿಗೆ ಭೇಟಿ ನೀಡುವಂತೆ ತಿಳಿಸಿದ್ದಾರೆ. ಕೊಠಡಿಯೊಳಗಿದ್ದ ಸರನಿತಾ ಅವರಿಂದ ಯಾವುದೇ ಪ್ರತಿಕ್ರಿಯೆ ಬಾರದೆ ಇರುವುದರಿಂದ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ.

ಅಯನಾವರಂ ಪೊಲೀಸರು ಸ್ಥಳಕ್ಕಾಗಮಿಸಿ ಕೊಠಡಿಯ ಬಾಗಿಲು ಒಡೆದು ನೋಡಿದಾಗ ಲ್ಯಾಪ್‌ಟಾಪ್‌ ಚಾರ್ಜರ್‌ ಹಿಡಿದುಕೊಂಡ ಸ್ಥಿತಿಯಲ್ಲಿ ಡಾ.ಸರಣಿತಾ ಮೃತದೇಹ ಪತ್ತೆಯಾಗಿದೆ.