Thursday, 12th December 2024

ಡಾ.ಮನಮೋಹನ್ ಸಿಂಗ್ ಆರೋಗ್ಯ ಸದ್ಯ ಸ್ಥಿರ

ನವದೆಹಲಿ: ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಆರೋಗ್ಯ ಸದ್ಯ ಸ್ಥಿರವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

89 ವರ್ಷದ ಕಾಂಗ್ರೆಸ್ ನಾಯಕನನ್ನ ಜ್ವರದ ಮೌಲ್ಯಮಾಪನಕ್ಕಾಗಿ ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿದೆ. ಸಧ್ಯ ಅವರ ಸ್ಥಿತಿ ಸ್ಥಿರವಾಗಿದೆ’ ಎಂದು ಏಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಕಾಂಗ್ರೆಸ್ ನಾಯಕ ವೈದ್ಯರ ಅವಲೋಕನದಲ್ಲಿದ್ದಾರೆ.

ಇನ್ನು ಮನಮೋಹನ್ ಸಿಂಗ್ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಟ್ವೀಟ್ ಮಾಡಿದ್ದು, ‘ಡಾ.ಮನ ಮೋಹನ್ ಸಿಂಗ್ ಜೀ ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ಮೋದಿ ಹೇಳಿದ್ದರು.