ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ, ಜಾಧವ್ ಅವರು ಸಹ್ಯಾದ್ರಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ.
ಸೀರಮ್ ಇನ್‌ಸ್ಟಿಟ್ಯೂಟ್‌ನ ವಿವಿಧ ಲಸಿಕೆಗಳಿಗೆ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆ ಪಡೆಯುವಲ್ಲಿ ಡಾ.ಜಾಧವ್ ಪ್ರಮುಖ ಪಾತ್ರ ವಹಿಸಿದ್ದಾರೆ. ಸಂಸ್ಥೆಯು ವಿಶ್ವದ ಅತಿದೊಡ್ಡ ಲಸಿಕೆ ತಯಾರಕರಲ್ಲಿ ಒಂದಾಗಿದೆ ಮತ್ತು 140ಕ್ಕೂ ಹೆಚ್ಚು ದೇಶಗಳಿಗೆ ಸೇವೆ ಸಲ್ಲಿಸುತ್ತಿದೆ.
ಡಾ.ಜಾಧವ್ ಅವರು ಎಂ.ಫಾರಂ ನಂತರ ನಾಗಪುರ ವಿಶ್ವವಿದ್ಯಾಲಯದಲ್ಲಿ ಪಿ.ಎಚ್.ಡಿ ಪದವಿ ಪಡೆದಿದ್ದಾರೆ. 1970 ರಲ್ಲಿ ಸಿಎಸ್‌ಐಆರ್‌ನ ಸಂಶೋಧನಾ ಫೆಲೋಶಿಪ್‌ನೊಂದಿಗೆ ತಮ್ಮ ವೃತ್ತಿಜೀವನ ಪ್ರಾರಂಭಿಸಿದರು. ಜಾಧವ್ ಅವರು 1979ರಲ್ಲಿ ಪುಣೆಯ ಸೀರಮ್ ಸಂಸ್ಥೆ ಸೇರಿದರು.
1992ರಿಂದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.