ಚೆನ್ನೈ: ತಮಿಳುನಾಡಿನ ನ್ಯಾಯಾಲಯಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇ ಡ್ಕರ್ ಅವರ ಭಾವಚಿತ್ರ ತೆಗೆಯುವಂತೆ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸ್ಪಷ್ಟನೆ ನೀಡಿದ್ದಾರೆ.
ಮಹಾತ್ಮಾ ಗಾಂಧಿ ಮತ್ತು ತಮಿಳು ಕವಿ-ಸಂತ ತಿರುವಳ್ಳುವರ್ ಅವರ ಭಾವಚಿತ್ರಗಳಿಗೆ ಮಾತ್ರ ಅನುಮತಿ ನೀಡಲಾಗುವುದು ಎಂದು ಮದ್ರಾಸ್ ಹೈಕೋರ್ಟ್ ಆದೇಶದ ನೀಡಿದೆ ಎಂಬ ವರದಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಕೀಲರು ತೀವ್ರ ಪ್ರತಿಭಟನೆ ನಡೆಸು ತ್ತಿದ್ದಾರೆ.
ಹೀಗಾಗಿ, ತಮಿಳುನಾಡು ಸಿಎಂ ಸ್ಟಾಲಿನ್ ಅವರ ಸೂಚನೆ ಮೇರೆಗೆ ಕಾನೂನು ಸಚಿವ ರೇಗುಪತಿ ಅವರು ಸಿಜೆ ಅವರನ್ನು ಭೇಟಿ ಯಾಗಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಅವರು ನಾವು ಅಂತಹ ಯಾವುದೇ ಆದೇಶ ಹೊರಡಿಸಿಲ್ಲ. ಅಂಬೇಡ್ಕರ್ ಅವರ ಭಾವ ಚಿತ್ರಗಳನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಡಾ ಬಿಆರ್ ಅಂಬೇಡ್ಕರ್ ಅವರು ನಮ್ಮ ಸಂವಿಧಾನದ ಶಿಲ್ಪಿ ಮತ್ತು ಗೌರವಾನ್ವಿತ ನ್ಯಾಯಾಲಯದ ಉದ್ದೇಶ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವಂತ ಮಹಾನ್ ವ್ಯಕ್ತಿಗಳು. ಭಾರತದ ಮೊದಲ ಕಾನೂನು ಸಚಿವ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸೂಕ್ತ ಸ್ಥಳವೆಂದು ಪರಿಗಣಿಸುತ್ತೇವೆ ಎಂದು ಅಣ್ಣಾಮಲೈ ಟ್ವೀಟ್ ಮಾಡಿದ್ದಾರೆ.