Monday, 14th October 2024

ರಾಷ್ಟ್ರಪತಿ ಚುನಾವಣೆ: ದ್ರೌಪತಿ ಮುರ್ಮು – ಎನ್ಡಿಎ ಸರ್ಕಾರದ ಅಭ್ಯರ್ಥಿ

ನವದೆಹಲಿ: ಭಾರತದ ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಹಿರಿಯ ಮುಖಂಡ ಯಶವಂತ್ ಸಿನ್ಹಾರ ಹೆಸರು ಪ್ರಕಟ ಗೊಂಡ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಅಭ್ಯರ್ಥಿ ಯಾರಾಗಬಹುದು ಎಂಬ ನಿರೀಕ್ಷೆಗೆ ಉತ್ತರ ಸಿಕ್ಕಿದ್ದು, ಬುಡಕಟ್ಟು ನಾಯಕಿ ದ್ರೌಪತಿ ಮುರ್ಮು ಅಧಿಕೃತ ಅಭ್ಯರ್ಥಿಯಾಗಿದ್ದಾರೆ.

ಪ್ರಧಾನಿ ನೇತೃತ್ವದಲ್ಲಿ ಜೂ.21ರಂದು ನಡೆದ ಬಿಜೆಪಿ ಸಂಸದೀಯ ಸಭೆ ಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯನ್ನು ಆಯ್ಕೆ ಮಾಡಲಾ ಗಿದೆ. ಈ ಸಭೆಯಲ್ಲಿ ಹಿರಿಯ ಮುಖಂಡರಾದ ಜೆಪಿ ನಡ್ಡಾ, ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ ಮುಂತಾದವರು ಪಾಲ್ಗೊಂಡಿದ್ದರು.

ಭಾರತದ ರಾಷ್ಟ್ರಪತಿ ಸ್ಥಾನಕ್ಕೆ ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು ಪರಿಗಣಿಸಿದ್ದು ಇದೇ ಮೊದಲಲ್ಲ. 2017ರಲ್ಲೂ ರಾಷ್ಟ್ರಪತಿ ಹುದ್ದೆಯ ಸಂಭಾವ್ಯ ಹೆಸರುಗಳಲ್ಲಿ ದ್ರೌಪದಿ ಹೆಸರು ಮುಂಚೂಣಿಯಲ್ಲಿತ್ತು. 2017ರಲ್ಲೂ ದ್ರೌಪದಿ ಹೆಸರನ್ನು ಮೋದಿ ಸೂಚಿಸಿದ್ದರು.

2017ರಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಷಿ ಜೊತೆಗೆ ಚಿತ್ರನಟ ಸೂಪರ್ ಸ್ಟಾರ್ ರಜನಿ ಕಾಂತ್ ಹೆಸರು ಚರ್ಚೆಗೆ ಬಂದಿತ್ತು.

ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರು ಪ್ರಪ್ರಥಮ ಬಾರಿಗೆ ದೇಶದ ಪ್ರಥಮ ಪ್ರಜೆ ಎಂದೆನಿಸಿಕೊಳ್ಳುವ ಕಾಲ ದೂರವಿಲ್ಲ. ಅಷ್ಟಕ್ಕೂ ಈ ದ್ರೌಪದಿ ಮುರ್ಮು ಯಾರು?

ಬುಡಕಟ್ಟು ಸಮುದಾಯದ ಮಹಿಳೆ: ಒಡಿಶಾ ಮೂಲದ ದ್ರೌಪದಿ ಮುರ್ಮು ತಂದೆ ಬಿರಂಚಿ ನಾರಾಯಣ್ ಟುಡು. ಕಳೆದ ಎರಡು ದಶಕಗಳಿಂದ ರಾಜಕೀಯ ಕ್ಷೇತ್ರದಲ್ಲಿ ರುವ ದ್ರೌಪದಿ ಒಡಿಶಾದ ಮಾಜಿ ಸಚಿವೆ ಜಾರ್ಖಂಡ್ ರಾಜ್ಯದ ಮಾಜಿ ರಾಜ್ಯಪಾಲ ರಾಗಿದ್ದವರು. ಕೇಂದ್ರ ಸಚಿವೆಯಾಗಿದ್ದವರು. ಉತ್ತಮ ಶಾಸಕಿ ಎಂಬ ಹೆಗ್ಗಳಿಕೆಗೆ ಪಾತ್ರರಾದವರು. ಇವರು ರಾಷ್ಟ್ರಪತಿಯಾದರೆ ಹಲವು ಪ್ರಥಮಗಳಿಗೆ ನಾಂದಿ ಹಾಡಲಿದ್ದಾರೆ.

ಪ್ರತಿಭಾ ಪಾಟೀಲ್ ನಂತರ ಎರಡನೇ ಮಹಿಳಾ ರಾಷ್ಟ್ರಪತಿ ಎನಿಸಲಿದ್ದಾರೆ. ಬುಡಕಟ್ಟು ಜನಾಂಗದ ಮಹಿಳೆ, ಒಡಿಶಾ/ಜಾರ್ಖಂಡ್ ಮೂಲದಿಂದ ಉನ್ನತ ಹುದ್ದೆಗೆ ಅಲಂಕರಿ ಸುವ ಮೊದಲ ಮಹಿಳೆ ಎನಿಸಿಕೊಳ್ಳಲಿದ್ದಾರೆ.ಬಿ.ಎ ಪದವೀಧರರಾದ ದ್ರೌಪದಿ, ರಾಯ್ ರಂಗಪುರ್ ದಲ್ಲಿರುವ ಶ್ರೀಅರಬಿಂದೋ ಕಾಲೇಜಿನಲ್ಲಿ ಗೌರವಾನ್ವಿತ ಸಹಾಯಕ ಪ್ರಾಧ್ಯಾಪಕಿ ಯಾಗಿದ್ದರು. ಒಡಿಶಾದ ನೀರಾವರಿ ಇಲಾಖೆಯಲ್ಲಿ ಜ್ಯೂನಿಯರ್ ಸಹಾಯಕ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿದರು. 1997ರಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.

ಪತಿ ಶ್ಯಾಮ್ ಚರಣ ಮುರ್ಮು ದಿವಂಗತರಾಗಿದ್ದು, ಇಬ್ಬರು ಪುತ್ರರು ದ್ರೌಪದಿ ಅವರನ್ನು ಅಗಲಿದ್ದಾರೆ. ಪುತ್ರಿ ಇತಿಶ್ರೀ ಮುರ್ಮು ಮಾತ್ರ ಜೊತೆಗಿದ್ದಾರೆ. 2017ರಲ್ಲಿ ದ್ರೌಪದಿ ವೈಯಕ್ತಿಕ 9. 5 ಲಕ್ಷ ರು ಆಸ್ತಿ ಘೋಷಿಸಿಕೊಂಡಿದ್ದರು.