Saturday, 14th December 2024

ಮಾದಕ ದ್ರವ್ಯ, ಶಸ್ತ್ರಾಸ್ತ್ರ ಕಳ್ಳಸಾಗಣೆ ಯತ್ನ ವಿಫಲ

ನವದೆಹಲಿ: ಪಂಜಾಬ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಗಡಿ ಭದ್ರತಾ ಪಡೆಯು ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ್ದು, ಮಾದಕ ದ್ರವ್ಯ ಹಾಗೂ ಶಸ್ತ್ರಾಸ್ತ್ರ ಕಳ್ಳಸಾಗಣೆ ಯತ್ನವನ್ನು ವಿಫಲ ಗೊಳಿಸಿದೆ ಎಂದು ಅಧಿಕಾರಿಗಳು  ತಿಳಿಸಿದ್ದಾರೆ.

ಗುರುದಾಸ್‌ಪುರ ಸೆಕ್ಟರ್‌ನ ಪಂಜ್‌ಗ್ರೇನ್ ಪ್ರದೇಶದಲ್ಲಿ ಮಧ್ಯರಾತ್ರಿ ಅನುಮಾನಸ್ಪದ ವಸ್ತುವನ್ನು ಪತ್ತೆ ಹಚ್ಚಿದ ಬಿಎಸ್‌ಎಫ್, ಡ್ರೋನ್ ಮೇಲೆ ಗುಂಡಿನ ದಾಳಿ ನಡೆಸಿತ್ತು.

ಬಳಿಕ ಗಗ್ಗರ್ ಹಾಗೂ ಸಿಂಘೊಕೆ ಪ್ರದೇಶದಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಹಳದಿ ಬಣ್ಣದ ಎರಡು ಪ್ಯಾಕೆಟ್‌ಗಳನ್ನು ವಶಪಡಿಸಿಕೊಳ್ಳ ಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಡ್ರೋನ್ ಮೂಲಕ ಎಸೆಯಲಾಗಿದೆ ಎಂದು ಶಂಕಿಸಲಾಗಿದೆ. ಬೇಲಿಯಿಂದ ಸುಮಾರು 2.7 ಕಿ.ಮೀ. ದೂರದಲ್ಲಿ ಪ್ಯಾಕೆಟ್‌ನಲ್ಲಿ ಪಿಸ್ತೂಲ್ ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.