ಪುಣೆ: ಹಿಂದೂಸ್ತಾನಿ ಗಾಯಕಿ ಡಾ. ಪ್ರಭಾ ಅತ್ರೆ (92) ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪುಣೆಯಲ್ಲಿರುವ ಅವರ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಕಿರಾನಾ ಘರಾನಾವನ್ನು ಪ್ರತಿನಿಧಿಸಿದ ಅತ್ರೆ ಅವರು ಭಾರತ ಸರ್ಕಾರದಿಂದ ಎಲ್ಲಾ ಮೂರು ಪದ್ಮ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ನಿದ್ರಿಸುವಾಗಲೇ ಹೃದಯಾಘಾತವಾಗಿದೆ.
ಅತ್ರೆ, 1932ರ ಸೆಪ್ಟೆಂಬರ್ 13ರಂದು ಜನಿಸಿದರು. ಕಾನೂನು ಪದವೀಧರರಾಗಿದ್ದ ಅವರು ಸಂಗೀತದಲ್ಲಿ ಡಾಕ್ಟರೇಟ್ ಪಡೆದಿದ್ದರು. ಬಹುಮುಖಿ ವ್ಯಕ್ತಿತ್ವದ ಅತ್ರೆ ಶಾಸ್ತ್ರೀಯ ಗಾಯಕಿ ಮಾತ್ರವಲ್ಲದೇ, ಶಿಕ್ಷಣತಜ್ಞೆಯಾಗಿ, ಸಂಶೋಧಕಿಯಾಗಿ, ಲೇಖಕಿಯಾಗಿ ಗುರುತಿಸಿಕೊಂಡಿದ್ದರು.
1990ರಲ್ಲಿ ಪದ್ಮಶ್ರೀ, 2002ರಲ್ಲಿ ಪದ್ಮಭೂಷಣ ಹಾಗೂ 2022ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.