ನವದೆಹಲಿ: ಬಿಜೆಪಿಯ ರಾಜ್ಯಸಭಾ ಸಂಸದ ಹರ್ದ್ವಾರ ದುಬೆ(74) ಸೋಮವಾರ ದೆಹಲಿಯ ಆಸ್ಪತ್ರೆಯಲ್ಲಿ ನಿಧನರಾದರು.
ಉತ್ತರ ಪ್ರದೇಶ ರಾಜ್ಯದ ಆಗ್ರಾದ ನಿವಾಸಿ ದುಬೆ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲು ತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆ ದಿದ್ದಾರೆ. ಎರಡು ಬಾರಿ ಶಾಸಕರಾಗಿ ಕೆಲಸ ಮಾಡಿದ್ದಾರೆ. ದುಬೆ ನಿಧನಕ್ಕೆ ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ.
“ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ಹರ್ದ್ವಾರ್ ದುಬೆ ಅವರ ಸಾವಿನ ಸುದ್ದಿ ನಮ್ಮನ್ನು ಆಘಾತಗೊಳಿಸಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಕುಟುಂಬ ಸದಸ್ಯರಿಗೆ ಸಾಂತ್ವನ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮೀರತ್‌ನ ಬಿಜೆಪಿ ಸಂಸದ ರಾಜೇಂದ್ರ ಅಗರ್ವಾಲ್ ಟ್ವೀಟ್ ಮಾಡಿದ್ದಾರೆ.
ರಾಜ್ಯಸಭಾ ಸದಸ್ಯ ದುಬೆ ನಿಧನದ ಸುದ್ದಿ ದುಃಖ ತಂದಿದೆ. ಇದರಿಂದ ಬಿಜೆಪಿ ಕುಟುಂಬಕ್ಕೆ ದೊಡ್ಡ ನಷ್ಟವಾಗಿದೆ. ಅವರ ಕುಟುಂಬ ಸದಸ್ಯರಿಗೆ ಈ ನೋವನ್ನು ತಡೆದುಕೊಳ್ಳುವ ಧೈರ್ಯ ನೀಡುವಂತೆ ಪ್ರಾರ್ಥಿಸುತ್ತೇನೆ ಎಂದು ಫತೇಪುರ್ ಸಿಕ್ರಿ ಸಂಸದ ರಾಕುಮಾರ್ ಚಾಹದ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.