Thursday, 19th September 2024

ನೂತನ ಸಿಜೆಐ ಡಿವೈ ಚಂದ್ರಚೂಡ್ ನ.9 ರಂದು ಪ್ರಮಾಣ ವಚನ ಸ್ವೀಕಾರ

ವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರು ಮಂಗಳವಾರ ನ್ಯಾಯ ಮೂರ್ತಿ ಡಿವೈ ಚಂದ್ರಚೂಡ್ ಅವರನ್ನು ಭಾರತದ ಹೊಸ ಸಿಜೆಐ ಎಂದು ಹೆಸರಿಸಿದ್ದಾರೆ.

ನ್ಯಾಯಮೂರ್ತಿ ಚಂದ್ರಚೂಡ್ ಅವರು ನವೆಂಬರ್ 9 ರಂದು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಿಜೆಐ ಯು.ಯು.ಲಲಿತ್ ಅವರು ನ್ಯಾಯಮೂರ್ತಿ ಚಂದ್ರಚೂಡ್ ಅವರ ಹೆಸರನ್ನು ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಕಳುಹಿಸಿದ್ದಾರೆ. ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ದೇಶದ 50 ನೇ ಸಿಜೆಐ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಸಿಜೆಐ ಲಲಿತ್ ಅವರು ಆಗಸ್ಟ್ 27, 2022 ರಂದು 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು ಮತ್ತು ನವೆಂಬರ್ 8 ರಂದು ನಿವೃತ್ತರಾಗುತ್ತಿದ್ದಾರೆ.

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ಅಧಿಕಾರಾವಧಿ 2 ವರ್ಷ 1 ದಿನವಾಗಿರುತ್ತದೆ. ಅವರು ನವೆಂಬರ್ 10, 2024 ರಂದು ನಿವೃತ್ತರಾಗಲಿದ್ದಾರೆ.