ಮುಂಬೈ : ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಭಾನುವಾರ ಬೆಳಗ್ಗೆ ಭೂಕಂಪನ ಸಂಭವಿಸಿದೆ.
ಕೊಲ್ಹಾಪುರದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.3 ತೀವ್ರತೆ ದಾಖಲಾಗಿದ್ದು, ಯಾವುದೇ ಸಾವು-ನೋವಿನ ಕುರಿತು ವರದಿಯಾಗಿಲ್ಲ.
ಮಣಿಪುರದ ಉಕ್ರುಲ್ ನಲ್ಲಿ ರಿಕ್ಟರ್ ಮಾಪಕದಲ್ಲಿ 4.3 ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. 109 ಕಿ.ಮೀ ಆಳದಲ್ಲಿ ಉಕ್ರುಲ್ ನ ಪೂರ್ವ-ಆಗ್ನೇಯಕ್ಕೆ 49 ಕಿ.ಮೀ ಭೂಕಂಪ ಸಂಭವಿಸಿದೆ.