Friday, 13th December 2024

ದೆಹಲಿಯಲ್ಲಿ ಪ್ರಬಲ ಭೂಕಂಪನ

ವದೆಹಲಿ: ಕೆಲ ದಿನಗಳ ಹಿಂದಷ್ಟೇ ನೇಪಾಳ ಸೇರಿದಂತೆ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಪ್ರಭಲ ಭೂಕಂಪನ ಸಂಭವಿಸಿತ್ತು. ಈ ಬೆನ್ನಲ್ಲೇ ಮತ್ತೆ ದೆಹಲಿಯಲ್ಲಿ ಪ್ರಬಲ ಭೂಕಂಪನ ಉಂಟಾಗಿದೆ.

ದೆಹಲಿ-ಎನ್ಸಿಆರ್ ಮತ್ತು ಲಕ್ನೋ ಪ್ರದೇಶದಲ್ಲಿ ಸೋಮವಾರ ಸಂಜೆ 4.22 ರ ಸುಮಾರಿಗೆ ಪ್ರಬಲ ಭೂಕಂಪನ ಸಂಭವಿಸಿದೆ.

ನೇಪಾಳದಲ್ಲೂ ಭೂಕಂಪದ ಅನುಭವವಾಗಿದೆ. ಹಿಮಾಲಯನ್ ಕೌಂಟಿಯಲ್ಲಿ 5.6 ತೀವ್ರತೆಯ ಭೂಕಂಪನ ಸಂಭವಿಸಿದೆ.

ನೇಪಾಳದಲ್ಲಿ ಕೆಲ ದಿನಗಳ ಹಿಂದೆ ಸಂಭವಿಸಿದ್ದಂತ ಪ್ರಭಲ ಭೂಕಂಪನ ಅನುಭವ, ದೆಹಲಿ ಸೇರಿದಂತೆ ಉತ್ತರ ಭಾರತದ ಅನೇಕ ರಾಜ್ಯಗಳ ಮೇಲೂ ಪರಿಣಾಮ ಬೀರಿತ್ತು. ಈಗ ಇಂದು ಮತ್ತೆ ದೆಹಲಿಯ ಎನ್ ಸಿಆರ್ ಮತ್ತು ಲಕ್ನೋ ಪ್ರದೇಶಗಳಲ್ಲಿ ಭೂಕಂಪನದ ಅನುಭವ ಉಂಟಾಗಿದೆ.