Friday, 13th December 2024

ಉಖ್ರುಲ್‌ನಲ್ಲಿ 4.0 ತೀವ್ರತೆಯ ಭೂಕಂಪ

ಖ್ರುಲ್ (ಮಣಿಪುರ): ಮಣಿಪುರದ ಉಖ್ರುಲ್‌ನಲ್ಲಿ ಶನಿವಾರ ಬೆಳಿಗ್ಗೆ 4.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ.

ಶನಿವಾರ ಬೆಳಗ್ಗೆ 6.14ಕ್ಕೆ ಭೂಮಿಯಿಂದ 10 ಕಿ.ಮೀ ಆಳದಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎನ್‌ಸಿಎಸ್ ತಿಳಿಸಿದೆ.

ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ.