Wednesday, 29th May 2024

ಮಿಡ್ನಾಪುರದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೂವರ ಸಾವು

ಎಗ್ರಾ (ಪಶ್ಚಿಮ ಬಂಗಾಳ) : ಪೂರ್ವ ಮಿಡ್ನಾಪುರದ ಪಟಾಕಿ ಕಾರ್ಖಾನೆಯಲ್ಲಿ ಮಂಗಳ ವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ ಮೂವರು ಪ್ರಾಣ ಕಳೆದುಕೊಂಡು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಖಾಡಿಕುಲ್ ಗ್ರಾಮದಲ್ಲಿ ಘಟನೆ ನಡೆದಿದೆ.

ಇಡೀ ಪ್ರದೇಶದಲ್ಲಿ ಹಲವಾರು ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂದಿದೆ. ಅಲ್ಲದೇ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೂರ್ವ ಮೇದಿನಿಪುರ ಜಿಲ್ಲೆಯ ಎಗ್ರಾ ಬ್ಲಾಕ್ ನಂಬರ್ ಒಂದರ ಸಹಾರಾ ಗ್ರಾಮ ಪಂಚಾಯತ್ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದಿದ್ದಾರೆ.

“ಪೂರ್ವ ಮೇದಿನಿಪುರದ ಎಗ್ರಾ ಬ್ಲಾಕ್‌ನಲ್ಲಿ ಬೃಹತ್ ಬಾಂಬ್ ಸ್ಫೋಟ ಸಂಭವಿಸಿದೆ. ಇದರಲ್ಲಿ ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಅನೇಕರು ಗಾಯ ಗೊಂಡಿದ್ದಾರೆ. ಬಾಂಬ್‌ಗಳನ್ನು ತಯಾರಿಸುತ್ತಿದ್ದ ಟಿಎಂಸಿ ನಾಯಕನ ಕಾರ್ಖಾನೆ ಯಲ್ಲಿ ಸ್ಫೋಟ ಸಂಭವಿಸಿದೆ.

ಮಂಗಳವಾರ ಮಧ್ಯಾಹ್ನ ದೊಡ್ಡ ಶಬ್ದದಿಂದ ಇಡೀ ಗ್ರಾಮ ತತ್ತರಿಸಿ ಹೋಗಿತ್ತು. ಇಲ್ಲಿಯವರೆಗೆ, ಎರಡು ಸುಟ್ಟ ಮೃತದೇಹಗಳು ಪ್ರದೇಶದ ಪಕ್ಕದಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಸ್ಥಳದಿಂದ ಹಲವಾರು ಜನರನ್ನು ರಕ್ಷಿಸಿ ಎಗ್ರಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಲು ಪ್ರದೇಶವನ್ನು ಸುತ್ತುವರಿದಿದ್ದಾರೆ.

error: Content is protected !!