ನವದೆಹಲಿ: ಈಶಾನ್ಯ ಭಾರತದ ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಬುಧವಾರ ಕೇಂದ್ರ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಘೋಷಣೆ ಮಾಡಲಿದೆ.
ನಾಗಾಲ್ಯಾಂಡ್ ವಿಧಾನಸಭೆ ಅವಧಿ ಮಾರ್ಚ್ 12ಕ್ಕೆ ಮುಕ್ತಾಯವಾಗಲಿದೆ. ಇದೇ ವೇಳೆ, ಮೇಘಾಲಯ ಮತ್ತು ತ್ರಿಪುರಾ ವಿಧಾನ ಸಭೆ ಅವಧಿಯು ಕ್ರಮವಾಗಿ ಮಾರ್ಚ್ 15 ಮತ್ತು ಮಾರ್ಚ್ 22ಕ್ಕೆ ಕೊನೆಗೊಳ್ಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗವು ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಪ್ರಸಕ್ತ ಸಾಲಿನಲ್ಲಿ ಒಟ್ಟು 9 ರಾಜ್ಯಗಳ ವಿಧಾನಸಭೆಗೆ ಚುನಾವಣೆ ನಡೆಯಲಿದೆ.
ನಾಗಾಲ್ಯಾಂಡ್, ಮೇಘಾಲಯ, ತ್ರಿಪುರಾ ಮಾತ್ರ ವಲ್ಲದೇ, ಕರ್ನಾಟಕ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಿಜೋರಾಮ್, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ.
Read E-Paper click here