Sunday, 15th December 2024

ಚುನಾವಣಾ ಆಯೋಗ ಸುದ್ದಿಗೋಷ್ಠಿ: ಗ್ರಾ.ಪಂ ಚುನಾವಣೆಗೆ ಡೇಟ್‌ ಘೋಷಣೆ?

ಬೆಂಗಳೂರು : ರಾಜ್ಯ ಚುನಾವಣಾ ಆಯೋಗ ಸೋಮವಾರ ಸುದ್ದಿಗೋಷ್ಠಿ ನಡೆಸಲಿದ್ದು, ಗ್ರಾಮಪಂಚಾಯಿತಿ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

3-4 ಹಂತಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ಹೈಕೋರ್ಟ್ ಚುನಾವಣೆ ನಡೆಸುವ ಬಗ್ಗೆ ನಿರ್ದೇಶನ ನೀಡಿದ್ದು, ಕೊರೊನಾ ಮಾರ್ಗಸೂಚಿಗಳೊಂದಿಗೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ಆಯೋಗದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.