Thursday, 19th September 2024

ಪಶ್ಚಿಮ ಬಂಗಾಳ, ಜಾರ್ಖಂಡ್‌ನಲ್ಲಿ ಇ.ಡಿ ಶೋಧ ಕಾರ್ಯಾಚರಣೆ

ವದೆಹಲಿ: ಭಾರತೀಯ ಸೇನೆಗೆ ಸೇರಿದ ಭೂಮಿ ಒತ್ತುವರಿ, ಹಣ ಅಕ್ರಮ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿ ಜಾರಿ ನಿರ್ದೇಶ ನಾಲಯದ ಅಧಿಕಾರಿಗಳು ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಶುಕ್ರವಾರ ಶೋಧ ಕಾರ್ಯಾ ಚರಣೆ ಆರಂಭಿಸಿದ್ದಾರೆ.

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರ ಆಪ್ತ ಅಮಿತ್‌ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇ.ಡಿ ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಶೋಧ ನಡೆಸಿದೆ.

ಅಕ್ರಮವಾಗಿ, ಕಲ್ಲಿದ್ದಲು ಸಾಗಣೆ ಮತ್ತು ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಅಮಿತ್‌ ಅವರ ಬಳಿ ಇವೆ ಎಂದು ಇ.ಡಿ ಮೂಲಗಳು ತಿಳಿಸಿವೆ.

ಸೊರೇನ್ ಅವರು ರಾಜ್ಯದಲ್ಲಿನ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆ ಸಲುವಾಗಿ ಗುರುವಾರ ಇ.ಡಿ ಎದುರು ಹಾಜರಾಗಬೇಕಿತ್ತು. ಆದರೆ, ಅವರು ವಿಚಾರಣೆಗೆ ತಪ್ಪಿಸಿಕೊಂಡಿದ್ದರು.