ನವದೆಹಲಿ: ಜಾರಿ ನಿರ್ದೇಶನಾಲಯದ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿಯನ್ನು ಕೇಂದ್ರ ಸರಕಾರ ಒಂದು ವರ್ಷ ವಿಸ್ತರಿಸಿದೆ. ಈ ಮೂಲಕ ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿಯನ್ನು ವಿಸ್ತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
60ರ ಹರೆಯದ ಮಿಶ್ರಾ ಅವರು ಆದಾಯ ತೆರಿಗೆ ಕೇಡರ್‌ನ 1984ರ ಬ್ಯಾಚ್‌ನ ಭಾರತೀಯ ಕಂದಾಯ ಸೇವೆ ಅಧಿಕಾರಿ. 2018 ನ.19ರಂದು ಅವರನ್ನು ಜಾರಿ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿತ್ತು.
ಜಾರಿ ನಿರ್ದೇಶನಾಲಯದ ನಿರ್ದೇಶಕರ ಹುದ್ದೆ ಎರಡು ವರ್ಷಗಳ ನಿಗದಿತ ಅವಧಿಯಾಗಿರುವುದರಿಂದ ಅಧಿಕಾರಾವಧಿ ಮುಂದಿನ ವಾರ ಕೊನೆಗೊಳ್ಳಲಿದೆ.
ಜಾರಿ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ಸಂಜಯ್ ಕುಮಾರ್ ಮಿಶ್ರಾ ಅವರ 2018 ನವೆಂಬರ್ 19ರ ಈ ಹಿಂದಿನ ನೇಮ ಕಾತಿ ಆದೇಶವನ್ನು ಮಾರ್ಪಾಡು ಮಾಡಲು ಭಾರತದ ರಾಷ್ಟ್ರಪತಿ ಅವರು ಅನುಮೋದನೆ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.