Friday, 22nd November 2024

ಸೋನಿಯಾಗೆ ’ಆರು ಗಂಟೆ’ ಇಡಿ ಡ್ರಿಲ್‌: ನಾಳೆಯೂ ವಿಚಾರಣೆ

#SoniaGandhi

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮಂಗಳವಾರ 6 ಗಂಟೆಗಳ ಕಾಲ ವಿಚಾರಣೆ ಒಳಪಡಿಸಿದ ಜಾರಿ ನಿರ್ದೇಶನಾಲಯ(ಇಡಿ) ಬುಧವಾರ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ನಾಯಕಿಗೆ ಸೂಚಿಸಲಾಗಿದೆ.

ಜು.21 ರಂದು ಇಡಿ ಎರಡು ಗಂಟೆಗಳ ಕಾಲ ಸೋನಿಯಾ ಅವರನ್ನು ಪ್ರಶ್ನಿಸಿತ್ತು. ಕೋವಿಡ್‌ನಿಂದ ಚೇತರಿಸಿಕೊಳ್ಳುತ್ತಿರುವ ಕಾರಣ ಅವರ ಕೋರಿಕೆಯ ಮೇರೆಗೆ ದಿನದ ವಿಚಾರಣೆಯನ್ನು ಕೊನೆಗೊಳಿಸಿತ್ತು. ಇಂದು ಎರಡನೇ ಸುತ್ತಿನ ವಿಚಾರಣೆಗೆ ಹಾಜರಾದ ಸೋನಿಯಾ ಗಾಂಧಿ ಅವರನ್ನು 6 ಗಂಟೆಗಳ ಕಾಲ ವಿಚಾರಣೆ ನಡೆಸಿ, ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳ ಲಾಗಿದೆ.

ನಾಳೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿ ದ್ದಾರೆ. ಮಂಗಳವಾರ ಸಂಜೆ 7 ಗಂಟೆಯವರೆಗೆ ಹೇಳಿಕೆ ದಾಖಲಿಸಿಕೊಳ್ಳಲಾಗಿದ್ದು, ನಂತರ ಅವರು ಇಡಿ ಕೇಂದ್ರ ಕಚೇರಿ ಯಿಂದ ತೆರಳಿದರು ಎಂದು ಹೇಳಿದ್ದಾರೆ.

ಮಂಗಳವಾರ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ರಾಹುಲ್ ಗಾಂಧಿ ಅವರೊಂದಿಗೆ ಜಾರಿ ನಿರ್ದೇಶನಾಲಯ ಕಚೇರಿಗೆ ಸೋನಿಯಾ ಗಾಂಧಿ ಆಗಮಿಸಿದರು.