Saturday, 23rd November 2024

ವಿವೋ ಮೊಬೈಲ್ ಉತ್ಪಾದಕ ಕಂಪನಿಗಳ ಮೇಲೆ ಇಡಿ ದಾಳಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಶಂಕೆಯ ಮೇಲೆ ವಿವೋ ಮೊಬೈಲ್ ಉತ್ಪಾದಕ ಕಂಪನಿಗಳ ಮೇಲೆ ಇಡಿ ದಾಳಿ ನಡೆದಿದೆ.

ದೇಶದ 44 ಪ್ರದೇಶಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಮಂಗಳ ವಾರ ಇಡಿ ಅಧಿಕಾರಿಗಳು ಚೀನಾದ ಮೊಬೈಲ್ ಉತ್ಪಾದಕ ಕಂಪನಿ ವಿವೋಗೆ ಸೇರಿದ 44 ಪ್ರದೇಶಗಳ ಮೇಲೆ ದಾಳಿ ಮಾಡಿದ್ದಾರೆ. ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಹ ದಾಳಿ ನಡೆಸಿದ್ದರು.

ಆದಾಯ ತೆರಿಗೆ ಇಲಾಖೆ ದಾಳಿಯ ವರದಿ ಬಳಿಕ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನಲೆ ಯಲ್ಲಿ ಇಡಿ ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಜಾರಿ ನಿರ್ದೇಶನಾಲಯದ ದಾಳಿ ಬಗ್ಗೆ ವಿವೋ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಉತ್ತರ ಪ್ರದೇಶ, ಬಿಹಾರ, ಮಧ್ಯ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ 44 ಸ್ಥಳಗಳ ಮೇಲೆ ದಾಳಿ ಮಾಡಲಾಗಿದೆ.

ಕಳೆದ ವರ್ಷದ ಡಿಸೆಂಬರ್‌ನಲ್ಲಿ ವಿವೋದ ಕಚೇರಿಗಳ ಮೇಲೆ ಐಟಿ ದಾಳಿ ನಡೆದಿತ್ತು.